Wednesday, September 9, 2026

BDA Apartments

Home Front Page ಕೇಂದ್ರ ಸಚಿವರ ಜೊತೆ ಸಭೆ: 35 ದಿನಗಳ ‘CJP’ ಅಹೋರಾತ್ರಿ ಹೋರಾಟ ಅಂತ್ಯ

ಕೇಂದ್ರ ಸಚಿವರ ಜೊತೆ ಸಭೆ: 35 ದಿನಗಳ ‘CJP’ ಅಹೋರಾತ್ರಿ ಹೋರಾಟ ಅಂತ್ಯ

ನವದೆಹಲಿ,ಜುಲೈ,25,2026 (www.justkannada.in):  ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೊನೆಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಬೆನ್ನಲ್ಲೆ ಇದೀಗ ಜಂತರ್ ಮಂತರ್ ನಲ್ಲಿ ನಡೆಯುತ್ತಿದ್ದ ಅಹೋರಾತ್ರಿ ಹೋರಾಟವನ್ನು ಕಾಕ್ರೋಚ್ ಜನತಾ ಪಾರ್ಟಿ ಅಂತ್ಯಗೊಳಿಸಿದೆ.

ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬಳಿಕ ಸಿಜೆಪಿ ನಾಯಕರ ಜೊತೆ ಕೇಂದ್ರ ಸಚಿವರಾದ ಜೆಪಿ ನಡ್ಡಾ ಅವರು ಸಭೆ ನಡೆಸಿದ್ದು ಸಭೆಯಲ್ಲಿ ಉಳಿದ ಎರಡು ಬೇಡಿಕೆಗಳನ್ನ ಈಡೇರಿಸುವ ಭರವಸೆ ನೀಡಿದ ಹಿನ್ನೆಲೆಯಲ್ಲಿ 35 ದಿನಗಳ ಅಹೋರಾತ್ರಿ ಹೋರಾಟವನ್ನು ಸಿಜೆಪಿ ಅಂತ್ಯಗೊಳಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಕುರಿತು ಮಾತನಾಡಿರುವ ಸಿಜೆಪಿ ವಕ್ತಾರ ಸೌರವ್ ದಾಸ್, ಸಿಜೆಪಿ ಪ್ರತಿಭಟನೆಯನ್ನು ಅಂತ್ಯಗೊಳಿಸುತ್ತೀವಿ. ಉಳಿದ 2 ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಸಮ್ಮತಿಸಿದೆ. ಹೀಗಾಗಿ ದೆಹಲಿಯಲ್ಲಿ ಜಂತರ್ ಮಂತರ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಪಡೆಯುತ್ತೇವೆ ಎಂದಿದ್ದಾರೆ.

Key words:  New Delhi, CJP, ends, struggle, Against, central government