ಬೆಂಗಳೂರು,ಅಕ್ಟೋಬರ್,10,2026 (www.justkannada.in): ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟಿಸುತ್ತಿದ್ದ ಸಿಜೆಪಿ ನಾಯಕರನ್ನ ಪೊಲೀಸರು ವಶಕ್ಕೆ ಪಡೆದ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ.
ಈ ಕುರಿತು ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ದೆಹಲಿಯಲ್ಲಿ ಸಿಜೆಪಿ ಪ್ರತಿಭಟನೆ ಹತ್ತಿಕ್ಕುವ ಕೆಲಸ ಆಗುತ್ತಿದೆ. ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಪ್ರತಿಭಟಿಸುವುದಕ್ಕೆ ಹಕ್ಕಿದೆ. ಆದರೆ ಪ್ರತಿಭಟನಾಕಾರರ ಧ್ವನಿ ಹತ್ತಿಕ್ಕುವ ಕೆಲಸ ಆಗುತ್ತಿದೆ. ಅವರು ನಡೆದಿದ್ದೇ ದಾರಿ ಅನ್ನೋ ತರ ಆಗಿದೆ ಎಂದರು.






