Friday, November 6, 2026

Dasara Wishes

Just Kannada DasraWishes_JK DasraWishes JK
Happy Dasara
Home Front Page “ತರಗತಿಗಳು ಆನ್ ಲೈನ್, ಪರೀಕ್ಷೆ ಆಫ್ ಲೈನ್ – ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ್”

“ತರಗತಿಗಳು ಆನ್ ಲೈನ್, ಪರೀಕ್ಷೆ ಆಫ್ ಲೈನ್ – ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ್”

ಬೆಂಗಳೂರು,ಏಪ್ರಿಲ್,12,2021(www.justkannada.in) : ಮುಂದಿನ ಶೈಕ್ಷಣಿಕ ವರ್ಷ (2021-22)ದಲ್ಲಿ ಮೊದಲು ಆನ್ ಲೈನ್ ತರಗತಿಗಳನ್ನು ಆರಂಭ ಮಾಡಲಾಗುವುದು. ಆದರೆ, ಆನ್ ಲೈನ್ ಪರೀಕ್ಷೆ ನಡೆಸಲು ಸಾಧ್ಯವಿಲ್ಲ ಎಂದು ಉನ್ನತ ಶಿಕ್ಷಣ ಸಚಿವ, ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದರು.Agriculture,Pumpset,Adequate,Electricity,giving,Ask,Protest ಸೋಮವಾರ ಕೋವಿಡ್ ಹಿನ್ನಲೆಯಲ್ಲಿ ನಡೆದ ಸಭೆ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಅವರು, ಆನ್ ಲೈನ್ ಪರೀಕ್ಷೆ ನಡೆಸಬೇಕೆಂದು ವಿದ್ಯಾರ್ಥಿ-ಪೋಷಕರು ಬೇಡಿಕೆ ಇಡುತ್ತಿದ್ದಾರೆ. ನಮ್ಮ ವ್ಯವಸ್ಥೆಯಲ್ಲಿ ಅದು ಸಾಧ್ಯವಿಲ್ಲ. ಪರೀಕ್ಷೆ  ಏನಿದ್ದರೂ ಆಫ್ ಲೈನ್ ನಲ್ಲಿ ನಡೆಯುತ್ತದೆ. ಕೆಲ ಡೀಮ್ಡ್ ವಿಶ್ವವಿದ್ಯಾಲಯಗಳು ಆನ್ ಲೈನ್ ಪರೀಕ್ಷೆ ಮಾಡಿಕೊಳ್ಳುತ್ತಿವೆ. ನಮ್ಮಲ್ಲಿ ಮಾತ್ರ ಇದಕ್ಕೆ ಅವಕಾಶವಿಲ್ಲ ಎಂದಿದ್ದಾರೆ.

ಮುಷ್ಕರ ನಿಂತ ಕೂಡಲೇ ಪರೀಕ್ಷೆಗಳು ಶುರು

ಸದ್ಯಕ್ಕೆ ಬಸ್ ಮುಷ್ಕರದಿಂದ ಪದವಿ, ಸ್ನಾತಕೋತ್ತರ, ಡಿಪ್ಲೊಮಾ, ಎಂಜಿನಿಯರಿಂಗ್ ಪರೀಕ್ಷೆಗಳ ವೇಳಾಪಟ್ಟಿಯಲ್ಲಿ ಕೊಂಚ ವ್ಯತ್ಯಯವಾಗಿದೆ. ಮುಷ್ಕರ ನಿಂತ ಕೂಡಲೇ ಪರೀಕ್ಷೆಗಳು ಶುರುವಾಗುತ್ತವೆ ಎಂದರು.

ಆಫ್ ಲೈನ್ ಅಥವಾ ಆನ್ ಲೈನ್ ಕ್ಲಾಸ್ ಹಾಜರಾತಿ ಕಡ್ಡಾಯClasses,Online,Examination,Offline,DCM,Dr.C.N.Ashwatthanarayana 

ಸೋಂಕು ನಿಯಂತ್ರಣಕ್ಕೆ ಬಂದ ಮೇಲೆ ಆಫ್ ಲೈನ್ ತರಗತಿಗಳನ್ನೂ ಆರಂಭ ಮಾಡಲಾಗುವುದು. ವಿದ್ಯಾರ್ಥಿಗಳು ತಮ್ಮ ಅನುಕೂಲಕ್ಕೆ ತಕ್ಕಂತೆ ಆಫ್ ಲೈನ್ ಅಥವಾ ಆನ್ ಲೈನ್ ಕ್ಲಾಸ್ ಗಳನ್ನು ಆಯ್ಕೆ ಮಾಡಿಕೊಳ್ಳಬಹದು. ಆದರೆ, ಎರಡರಲ್ಲಿ ಯಾವುದಾದರೂ ಒಂದರಲ್ಲಿ ಹಾಜರಾತಿ ಕಡ್ಡಾಯ ಎಂದು ಡಿಸಿಎಂ ಸ್ಪಷ್ಟಪಡಿಸಿದರು.

key words :  Classes-Online-Examination-Offline-DCM-Dr.C.N.Ashwatthanarayana