Friday, October 9, 2026

BDA Apartments

Increase in COVID cases: DC’s village stay program with held BDA JK_Adv BDA Adv
Home Front Page ಡಿಕೆಶಿಗೆ ಕೆಪಿಸಿಸಿ ಅಧ್ಯಕ್ಷ ಗದ್ದುಗೆ, ಪರಮೇಶ್ವರ್’ಗೆ ಸಿಎಲ್’ಪಿ ಸ್ಥಾನ ನೀಡಲು ಕೈ ಹೈಕಮಾಂಡ್ ಪ್ಲಾನ್ !?

ಡಿಕೆಶಿಗೆ ಕೆಪಿಸಿಸಿ ಅಧ್ಯಕ್ಷ ಗದ್ದುಗೆ, ಪರಮೇಶ್ವರ್’ಗೆ ಸಿಎಲ್’ಪಿ ಸ್ಥಾನ ನೀಡಲು ಕೈ ಹೈಕಮಾಂಡ್ ಪ್ಲಾನ್ !?

ಬೆಂಗಳೂರು, ಡಿಸೆಂಬರ್ 12, 2019 (www.justkannada.in): ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್ ಅವರನ್ನು ನೇಮಕ ಮಾಡುವ ಸಾಧ್ಯತೆ ಇದೆ.

ಮಾಜಿ ಉಪಮುಖ್ಯಮಂತ್ರಿ ಪರಮೇಶ್ವ್ ಗೆ ಸಿಎಲ್ ಪಿ ಸ್ಥಾನ ಹಾಗೂ ಸಿದ್ದರಾಮಯ್ಯರಿಗೆ ವಿಪಕ್ಷ ಸ್ಥಾನದಲ್ಲಿ ಮುಂದುವರೆಸಲು ಕಾಂಗ್ರೆಸ್ ಹೈಕಮಾಂಡ್ ಸಿದ್ಧತೆ ನಡೆಸಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಉಪಚುನಾವಣೆಯಲ್ಲಿ ಹೀನಾಯ ಸೋಲಿನ ಹೊಣೆ ಹೊತ್ತು ವಿಪಕ್ಷ ನಾಯಕ, ಸಿಎಲ್ ಪಿ ಸ್ಥಾನಕ್ಕೆ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಈ ನಿರ್ಧಾರ ಕೈಗೊಳ್ಳಲು ಮುಂದಾಗಿದೆ.