Sunday, August 16, 2026

BDA Apartments

Home Front Page ಸಂಗೀತ ನಿರ್ದೇಶಕ ರಾಜನ್ ನಿಧನಕ್ಕೆ ಸಿಎಂ ಬಿ.ಎಸ್. ಯಡಿಯೂರಪ್ಪ ಸಂತಾಪ

ಸಂಗೀತ ನಿರ್ದೇಶಕ ರಾಜನ್ ನಿಧನಕ್ಕೆ ಸಿಎಂ ಬಿ.ಎಸ್. ಯಡಿಯೂರಪ್ಪ ಸಂತಾಪ

ಬೆಂಗಳೂರು,ಅಕ್ಟೋಬರ್,12,2020(www.justkannada.in) : ಹಿರಿಯ ಸಂಗೀತ ನಿರ್ದೇಶಕ ರಾಜನ್ ಅವರ ನಿಧನಕ್ಕೆ ಸಿಎಂ ಬಿ.ಎಸ್. ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.jk-logo-justkannada-logoಹೆಸರಾಂತ ಹಿರಿಯ ಸಂಗೀತ ನಿರ್ದೇಶಕ ರಾಜನ್ ಅವರು ನಿಧನರಾದ ಸುದ್ದಿ ತೀವ್ರ ಶೋಕವನ್ನುಂಟು ಮಾಡಿದೆ. ತಮ್ಮ ಸಹೋದರ ನಾಗೇಂದ್ರಪ್ಪ ಅವರೊಂದಿಗೆ ‘ರಾಜನ್‌-ನಾಗೇಂದ್ರ’ ಹೆಸರಿನಲ್ಲಿ ಜಂಟಿಯಾಗಿ ಅನೇಕ ಜನಪ್ರಿಯ, ಯಶಸ್ವಿ ಕನ್ನಡ ಚಿತ್ರಗಳಿಗೆ ಸಂಗೀತ ನೀಡಿದ್ದ ರಾಜನ್ ಅವರ ನಿಧನದಿಂದ ಕನ್ನಡ ಚಿತ್ರರಂಗ ಅನಾಥವಾಗಿದೆ ಎಂದು ರಾಜನ್ ನಿಧನಕ್ಕೆ ಟ್ವೀಟರ್ ನಲ್ಲಿ ಸಿಎಂ ಬಿಎಸ್ ವೈ ಸಂತಾಪ ಸೂಚಿಸಿದ್ದಾರೆ.

ಚಿತ್ರರಸಿಕರು ಎಂದಿಗೂ ಮರೆಯಲಾರದಂತಹ ನೂರಾರು ಸುಮಧುರ ಗೀತೆಗಳ ಮೂಲಕ ಶ್ರೀ ರಾಜನ್ ಅವರು ಸದಾ ನೆನಪಿನಲ್ಲಿರುತ್ತಾರೆ. ರಾಜನ್ ಅವರ ಆತ್ಮಕ್ಕೆ ಚಿರಶಾಂತಿಯನ್ನು ಪ್ರಾರ್ಥಿಸುತ್ತೇನೆ. ಅವರ ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ನೋವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಕೋರುತ್ತೇನೆ ಎಂದು ತಿಳಿಸಿದ್ದಾರೆ.

key words : CM B.S.yediyurappa-music-director-Rajan’s-death-condolences