Saturday, October 10, 2026

BDA Apartments

Increase in COVID cases: DC’s village stay program with held BDA JK_Adv BDA Adv
Home Front Page ಸಚಿವ ಸಂಪುಟ ಪುನರಚನೆ ಬಗ್ಗೆ ಎರಡು ಮೂರು ದಿನಗಳಲ್ಲಿ ನಿರ್ಧಾರ- ಅಮಿತ್ ಶಾ ಭೇಟಿ ಬಳಿಕ...

ಸಚಿವ ಸಂಪುಟ ಪುನರಚನೆ ಬಗ್ಗೆ ಎರಡು ಮೂರು ದಿನಗಳಲ್ಲಿ ನಿರ್ಧಾರ- ಅಮಿತ್ ಶಾ ಭೇಟಿ ಬಳಿಕ ಸಿಎಂ ಬೊಮ್ಮಾಯಿ ಸ್ಪಷ್ಟನೆ.

ನವದೆಹಲಿ,ಮೇ,11,2022(www.justkannada.in):  ಸಚಿವ ಸಂಪುಟ ಪುನರಚನೆ ಬಗ್ಗೆ ಕೇಂದ್ರ ಗೃಹಸಚಿವ ಅಮಿತ್ ಶಾ ಅವರ  ಜತೆ ಸುದೀರ್ಘವಾಗಿ ಚರ್ಚಿಸಿದ್ದೇನೆ. ಎರಡು ಮೂರು ದಿನಗಳಲ್ಲಿ ಸಂಪುಟ ಪುನರಚನೆ ಬಗ್ಗೆ ನಿರ್ಧಾರವಾಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಇಂದು ಕೇಂದ್ರ ಗೃಹಸಚಿವ ಅಮಿತ್ ಶಾ ಭೇಟಿ ಮಾಡಿ ಚರ್ಚಿಸಿದ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಸಂಫುಟ ಪುನರಚನೆ ಬಗ್ಗೆ ವರಿಷ್ಠರ ಜತೆ ಚರ್ಚಿಸಿದ್ದೇನೆ. ಎರಡು ಮೂರು ದಿನಗಳಲ್ಲಿ ಪುನರಚನೆ ಬಗ್ಗೆ ನಿರ್ಧಾರವಾಗಲಿದೆ. ತೀರ್ಮಾನ  ತೆಗೆದುಕೊಳ್ಳುವುದಾಗಿ ಅಮಿತ್ ಶಾ ಹೇಳಿದ್ದಾರೆ. ಸಂಪುಟ ಸಂಬಂಧ ನಾನು ಯಾರ ಹೆಸರನ್ನೂ ಪ್ರಸ್ತಾಪಿಸಿಲ್ಲ. ಸಂಪುಟಕ್ಕೆ  ಸೇರುವವರ ಹೆಸರು ಚರ್ಚೆಯಾಗುಲ್ಲ ಎಂದರು.

ಇಂದು ಸಂಜೆ  ಜೆಪಿ ನಡ್ಡಾ ಅವರ ಜತೆ ಮಾತನಾಡುವೆ. ಜೆಪಿ ನಡ್ಡಾ ಜತೆ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದರು.  ಮುಂದಿನ ವಾರ ಬಹಳ ಮುಖ್ಯ ಸ್ಥಳೀಯ ಚುನಾವಣೆಗಳ ಬಗ್ಗೆ ಚರ್ಚೆಯಾಗುತ್ತಿದೆ. ರಾಜಕೀಯ ಸ್ಥಿತಿಗತಿ ಬದಲಾವಣೆ ಆಗಬಹುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

Key words: CM-Basavaraj Bommai-cabinet-amith sha-discussion