ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲು ಶೀಘ್ರದಲ್ಲೇ ದೆಹಲಿಗೆ – ಸಿಎಂ ಬಸವರಾಜ ಬೊಮ್ಮಾಯಿ.

ಚಿತ್ರದುರ್ಗ,ಅಕ್ಟೋಬರ್,22,2022(www.justkannada.in):  ರಾಜ್ಯ ಸಚಿವ ಸಂಪುಟ ಸೇರಲು ಜಾತಕ ಪಕ್ಷಿಯಂತೆ ಕಾದು ಕುಳಿತಿರುವ ಸಚಿವಾಕಾಂಕ್ಷಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸಿಹಿಸುದ್ಧಿ ನೀಡಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಶೀಘ್ರದಲ್ಲೇ ದೆಹಲಿಗೆ ತೆರಳಿ ವರಿಷ್ಠ ಜೊತೆ ಚರ್ಚಿಸುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.

ಚಿತ್ರದುರ್ಗ ಜಿಲ್ಲೆ ಹೊಸದುರ್ಗದಲ್ಲಿ ಇಂದು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಚಿತ್ರದುರ್ಗ ಜಿಲ್ಲೆಗೂ ಪ್ರಾತಿನಿಧ್ಯ ಕೊಡಿಸಲು ಯತ್ನಿಸುತ್ತೇನೆ. ಇನ್ನು ಕೆ.ಎಸ್ ಈಶ್ವರಪ್ಪ ಮತ್ತು ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀಡುವ ವಿಚಾರ ಈ  ಬಗ್ಗೆ ಹೈಕಮಾಂಡ್ ತೀರ್ಮಾನಿಸಲಿದೆ ಎಂದರು.

Key words: CM -Basavaraj Bommai -Delhi -soon – discuss -cabinet expansion.