ಹಾವೇರಿಯಲ್ಲಿ 127.63  ಕೋಟಿ ರೂಪಾಯಿ ಮೊತ್ತದ ವವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಸಿಎಂ ಬೊಮ್ಮಾಯಿ ಶಂಕು ಸ್ಥಾಪನೆ ಹಾಗೂ ಶಿಲಾನ್ಯಾಸ.

ಹಾವೇರಿ,ಆಗಸ್ಟ್,28,2021(www.justkannada.in):  ಹಾವೇರಿ ಹೊಸಮನಿ  ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಯಿ ಅವರು ಹಾವೇರಿ ವಿಧಾನ ಸಭಾ ಕ್ಷೇತ್ರದ  ರೂ. 127.63  ಕೋಟಿ ರೂಪಾಯಿ ಮೊತ್ತದವವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಶಂಕು ಸ್ಥಾಪನೆ ಹಾಗೂ ಶಿಲಾನ್ಯಾಸ ನೇರವೇರಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲ್ಲೂಕಿನಲ್ಲಿ ಒಟ್ಟು  62.23 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗಿರುವ 9 ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದರು. ಅದೇ ರೀತಿ 11.06 ಕೋಟಿ ರೂಪಾಯಿ ಮೊತ್ತದ ಎರಡು ಅಭಿವೃದ್ಧಿ ಕಾಮಗಾರಿಗಳಿಗೆ ಶನಿವಾರ ಅವರು ರಾಣೆಬೆನ್ನೂರಿನ ಎಪಿಎಂಸಿ ಆವರಣದಲ್ಲಿ ಶಂಕುಸ್ಥಾಪನೆ ನೆರವೇರಿಸಿದರು.

14.12 ಕೋಟಿ ರೂ. ವೆಚ್ಚದಲ್ಲಿ  24*7 ಕುಡಿಯುವ ನೀರಿನ ಯೋಜನೆಯನ್ನು ಎಪಿಎಂಸಿ ಮಾರುಕಟ್ಟೆ ಸಮುದಾಯ ಭವನ ಆವರಣದಲ್ಲಿ  ಲೋಕಾರ್ಪಣೆಗೊಳಿಸಿದರು.

ತಾಲ್ಲೂಕಿನ ಕೊಪ್ಪೇಲೂರು ಗ್ರಾಮದಲ್ಲಿ ನಬಾರ್ಡ್ ಯೋಜನೆಯಡಿ ರೂ.1. 70 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಪ್ರಾಥಮಿಕ ಆರೋಗ್ಯ ಕೇಂದ್ರ, ರೂ.93 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಸರ್ಕಾರಿ ಪದವಿ ಪೂರ್ವ ಕಾಲೇಜು ಕೊಠಡಿ, ರೂ.62.80 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಅರೆಮಲ್ಲಾಪೂರ ಕರ್ನಾಟಕ ಪಬ್ಲಿಕ್ ಶಾಲೆಯ ಕಟ್ಟಡ, ರೂ.49.50 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ರೈತ ಸಂಪರ್ಕ ಕೇಂದ್ರ, ರೂ.50 ಲಕ್ಷ ವೆಚ್ಚದಲ್ಲಿ ನವೀಕರಿಸಿರುವ ನಗರಸಭೆ ಸರ್.ಎಂ.ವಿಶ್ವೇಶ್ವರಯ್ಯ ಸಭಾಂಗಣವನ್ನು ಉದ್ಘಾಟಿಸಿದರು.

ನಗರಸಭೆ ರೂ.5 ಕೋಟಿ ಲಕ್ಷ ವೆಚ್ಚದಲ್ಲಿ ಕೈಗೊಂಡಿರುವ ದ್ವಿಭಾಜಕ ರಸ್ತೆ, ಚರಂಡಿ ನಿರ್ಮಾಣ, ವಿದ್ಯುತ್ ಕಂಬ ಸೇರಿದಂತೆ ವಿವಿಧ ಮೂಲ ಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ಸಿಎಂ ಬಸವರಾಜ ಬೊಮ್ಮಾಯಿ  ಉದ್ಘಾಟಿಸಿದರು.

ಅದರ ಜತೆ ರೂ.6.36 ಕೋಟಿ ವೆಚ್ಚದಲ್ಲಿ ಸಮುದಾಯ ಭವನ, ದೊಡ್ಡಕೆರೆ ಹಾಗೂ ಕಮದೋಡ, ಚಳಗೇರಿ ಹಾಗೂ ಕರೂರ ಕೆರೆಗಳಿಗೆ ನೀರು ತುಂಬಿಸುವ ರೂ.32.50 ಕೋಟಿ ವೆಚ್ಚದ ಕಾಮಗಾರಿಯನ್ನು ಉದ್ಘಾಟನೆ ಮಾಡಿದರು.  ರೂ.9.06 ಕೋಟಿ ವೆಚ್ಚದಲ್ಲಿ ಜಲಜೀವನ ಮಿಷನ್ ಯೋಜನೆಯಡಿ ಕರೂರ, ಚಳಗೇರಿ, ಅರೆಮಲ್ಲಾಪುರ ಹಾಗೂ ಕವಲೂರು ಗ್ರಾಮಗಳಿಗೆ ನಲ್ಲಿ ನೀರು ಸಂಪರ್ಕ ಕಾಮಗಾರಿಯನ್ನು ಸಿಎಂ ಉದ್ಘಾಟಿಸಿದರು.

ಅರೆಮಲ್ಲಾಪೂರ ಕರ್ನಾಟಕ ಪಬ್ಲಿಕ್ ಶಾಲೆಯ ಮೂಲಭೂತ ಸೌಕರ್ಯಗಳಡಿ ರೂ.2 ಕೋಟಿ ವೆಚ್ಚದಲ್ಲಿ ಹೆಚ್ಚುವರಿ ಮೂಲ ಸೌಕರ್ಯ ಕಲ್ಪಿಸುವ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ,  ಬೈರತಿ ಬಸವರಾಜ್, ಬಿಸಿ ಪಾಟೀಲ್, ಸಂಸದ ಶಿವಕುಮಾರ್ ಉದಾಸಿ, ಶಾಸಕ ಅರುಣ್ ಕುಮಾರ್ ಸೇರಿದಂತೆ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

Key words: CM –basavaraj Bommai -inspection – various- development works- worth Rs 127.63 crore – Haveri.