ಒಬಿಸಿ ಮೀಸಲಾತಿ ಬಗ್ಗೆ ಸ್ಥಿತಿಗತಿ ಚರ್ಚಿಸಲು ಸಭೆ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು, ಫೆಬ್ರವರಿ 12,2022(www.justkannada.in):  ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಗೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಅದರ ಪರಿಣಾಮಗಳೇನು ಹಾಗೂ ರಾಜ್ಯದ ಸ್ಥಿತಿಗತಿಯ ಬಗ್ಗೆ ಚರ್ಚಿಸಲು ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ  ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದಲ್ಲಿ ಇತರೆ ಹಿಂದುಳಿದ ವರ್ಗಗಳಿಗೆ ನೀಡಲಾಗಿರುವ ಮೀಸಲಾತಿಯನ್ನು ಉಳಿಸಿಕೊಂಡು ಚುನಾವಣೆಯನ್ನು ಯಾವ ರೀತಿ ಮಾಡಬೇಕೆಂದು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು  ತಿಳಿಸಿದರು.

key words: cm basavaraj bommai-OBC -Reservation