ವೀಕೆಂಡ್ ಕರ್ಫ್ಯೂ ಬಗ್ಗೆ ಸಚಿವ ಸಂಪುಟ ಸಭೆ ಬಳಿಕ ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು ಹೀಗೆ.

ಬೆಂಗಳೂರು,ಜನವರಿ,6,2022(www.justkannada.in):  ರಾಜ್ಯದಲ್ಲಿ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆ ಜಾರಿಮಾಡಲಾಗಿರುವ ವೀಕೆಂಡ್ ಕರ್ಫ್ಯೂಗೆ ಭಾರಿ ವಿರೋಧ ವ್ಯಕ್ತವಾಗಿದೆ. ಇನ್ನು ಕಾಂಗ್ರೆಸ್ ಸಹ ಸರ್ಕಾರದ ಆದೇಶಕ್ಕೆ ಸೆಡ್ಡು ಹೊಡೆದು ಮೇಕೆದಾಟು ಪಾದಯಾತ್ರೆ ಮಾಡಲು ಹೊರಟಿದೆ.

ಈ ಮಧ್ಯೆ ವೀಕೆಂಡ್ ಕರ್ಫ್ಯೂಗೆ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆಸಲಾಗಿದ್ದು, ಸದ್ಯಕ್ಕೆ ವೀಕೆಂಡ್ ಕರ್ಫ್ಯೂ ವಾಪಸ್ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ, ಸರ್ಕಾರದ ಆದೇಶ ಸದ್ಯಕ್ಕೆ ಯಥಾಸ್ಥಿತಿ ಇರಲಿದೆ. ಒಂದು ವಾರದ ಬಳಿಕ ಕೇಸ್ ನೋಡಿಕೊಂಡು ತೀರ್ಮಾನ ಕೈಗೊಳ್ಳಲಾಗುತ್ತದೆ. ಸದ್ಯಕ್ಕೆ ವೀಕೆಂಡ್ ಕರ್ಫ್ಯೂ ವಾಪಸ್ ಪಡೆಯಲ್ಲ ಎಂದು ತಿಳಿಸಿದ್ದಾರೆ.

Key words: CM Basavaraja Bommai – Cabinet meeting – Weekend Curfew