Saturday, September 5, 2026

BDA Apartments

Home Front Page ಉಚಿತ ಬೂಸ್ಟರ್ ಡೋಸ್ ಕಾರ್ಯಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ.

ಉಚಿತ ಬೂಸ್ಟರ್ ಡೋಸ್ ಕಾರ್ಯಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ.

ಬೆಂಗಳೂರು,ಜುಲೈ,16,2022(www.justkannada.in): ಅಮೃತ ಮಹೋತ್ಸವ ಅಭಿಯಾನದಡಿ  ಉಚಿತ ಬೂಸ್ಟರ್ ಡೋಸ್ ನೀಡುವ ಕಾರ್ಯಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು.

ಅಮೃತ ಮಹೋತ್ಸವ ಅಭಿಯಾನದಡಿ 75 ದಿನಗಳ ಕಾಲ ಬೂಸ್ಟರ್ ಡೋಸ್ ಲಸಿಕೆ ನೀಡುವ ಕಾರ್ಯಕ್ರಮ ನಡೆಯಲಿದ್ದು ಇಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಕೇಂದ್ರದ ಸಹಾಯದೊಂದಿಗೆ  ಬೂಸ್ಟರ್ ಡೋಸ್ ಲಸಿಕೆ ನೀಡಲಾಗುತ್ತಿದೆ.  ವೈರಸ್ ವಿರುದ್ಧದ ಹೋರಾಟದಲ್ಲಿ ಲಸಿಕೆ ಮಹತ್ವದ ಪಾತ್ರವಿದೆ.  ಕೇಂದ್ರ ಸರ್ಕಾರ ಕೊರೋನಾ ನಿರ್ವಹಣೆಗೆ ಸಾಕಷ್ಟು ಸಹಾಯ ಮಾಡಿದೆ. ಕೇಂದ್ರ ಹಣ ಕೊಡದಿದಿದ್ದರೇ ರಾಜ್ಯ ಬೊಕ್ಕಸಕ್ಕೆ ಹೊಡೆತ ಬೀಳುತ್ತಿತ್ತು . ಕೊರೊನಾ ಕಡಿಮೆ ಆಗಿ ಕಣ್ಮರೆಯಾಗುತ್ತಿದೆ. ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು.

ಕಾರ್ಯಕ್ರಮದಲ್ಲಿ ಸಚಿವರಾದ ಸುಧಾಕರ್ ಸೇರಿ ಹಲವರು ಭಾಗಿಯಾಗಿದ್ದರು.

Key words: CM-Basavaraja Bommai-drive –free- booster dose-program.