Sunday, August 23, 2026

BDA Apartments

Home Front Page ಶಿಗ್ಗಾಂವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಿಎಂ ಬಸವರಾಜ ಬೊಮ್ಮಾಯಿ.

ಶಿಗ್ಗಾಂವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಿಎಂ ಬಸವರಾಜ ಬೊಮ್ಮಾಯಿ.

ಹಾವೇರಿ,ಏಪ್ರಿಲ್,15,2023(www.justkannada.in): ರಾಜ್ಯ ವಿಧಾನಸಭಾ ಕಣ ರಂಗೇರಿದ್ದು  ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಶಿಗ್ಗಾಂವಿ ಬಿಜೆಪಿ ಅಭ್ಯರ್ಥಿಯಾಗಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಕೆ ಮಾಡಿದರು.

ತಹಶೀಲ್ದಾರ್ ಕಚೇರಿಯಲ್ಲಿ  ಸಿಎಂ ಬಸವರಾಜ ಬೊಮ್ಮಾಯಿ ನಾಮಪತ್ರ ಸಲ್ಲಿಕೆ ಮಾಡಿದರು. ಏಪ್ರಿಲ್ 19 ರಂದು ಸಿಎಂ ಬೊಮ್ಮಾಯಿ  ಮತ್ತೆ ನಾಮಪತ್ರ ಸಲ್ಲಿಸಲಿದ್ದಾರೆ.

ಬಳಿಕ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಶಿಗ್ಗಾಂವಿಯಲ್ಲಿ ಮತ್ತೊಮ್ಮೆ ಆಯ್ಕೆ ಬಯಸಿ ನಾಮಪತ್ರ ಸಲ್ಲಿಸಿರುವೆ. ಹಿಂದಿ ಎಲ್ಲಾ ದಾಖಲೆ ಮುರಿದು ಅಧಿಕ ಮತಗಳ ಅಂತರದಿಂದ ಗೆಲ್ಲುತ್ತೇನೆ ಕ್ಷೇತ್ರದಲ್ಲಿ ನಾಣು ಮಾಡಿರುವ ಅಭಿವೃದ್ದಿ ನನ್ನ ಗೆಲುವಿಗೆ ಶ್ರೀರಕ್ಷೆಯಾಗಲಿದೆ. ನಾನು ಎಲ್ಲಾ ಪೈಪೋಟಿಗಳನ್ನ ಎದರಿಸುತ್ತೇನೆ. ಜನರು ಈ ಬಾರಿ ಹೆಚ್ಚಿನ ಬೆಂಬಲ ಕೊಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Key words: CM Basavaraja Bommai – filed-nomination – BJP candidate – Shiggamvi Constituency.