Sunday, September 20, 2026

BDA Apartments

ಪ್ರಧಾನಿ ಮೋದಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದ ಸಿಎಂ ಬಸವರಾಜ ಬೊಮ್ಮಾಯಿ BDA JK_Adv...
Home Front Page ಪ್ರಧಾನಿ ಮೋದಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದ ಸಿಎಂ ಬಸವರಾಜ ಬೊಮ್ಮಾಯಿ.

ಪ್ರಧಾನಿ ಮೋದಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದ ಸಿಎಂ ಬಸವರಾಜ ಬೊಮ್ಮಾಯಿ.

ನವದೆಹಲಿ,ಜುಲೈ,30,2021(www.justkannada.in):  ಕರ್ನಾಟಕದ ನೂತನ ಸಿಎಂ ಆದ ಬಳಿಕ ಮೊದಲ ಬಾರಿಗೆ ದೆಹಲಿಗೆ ಭೇಟಿ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿಯಾದರು.

ನವದೆಹಲಿಯ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ಮೋದಿ ಅವರ ನಿವಾಸಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿದರು. ಈ ವೇಳೆ ಪ್ರಧಾನಿ ಮೋದಿಗೆ ಅಭಿನಂದನೆ ಸಲ್ಲಿಸಿ ಚರ್ಚೆ ನಡೆಸಿದರು.

ಇಂದು ಬೆಳಿಗ್ಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನ ಸಿಎಂ ಬಸವರಾಜ ಬೊಮ್ಮಾಯಿ ಭೇಟಿಯಾಗಿ ಚರ್ಚಿಸಿದ್ದರು. ಇದೀಗ ಪ್ರಧಾನಿ ಮೋದಿ ಅವರನ್ನ ಭೇಟಿಯಾಗಿದ್ದು ನಂತರ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರನ್ನ ಭೇಟಿಯಾಗುವ ಸಾಧ್ಯತೆ ಇದೆ.

Key words: CM Basavaraja Bommai-  met -Prime Minister- Modi