Friday, October 9, 2026

BDA Apartments

ಇವರ ಗೆಲುವು ಬಹುತೇಕ ಖಚಿತ BDA JK_Adv BDA Adv
Home Front Page ದಾವೋಸ್’ ಪ್ರವಾಸ ಮುಗಿಸಿ ಬೆಂಗಳೂರಿಗೆ ಹಿಂದಿರುಗಿದ ಸಿಎಂ ಬಸವರಾಜ ಬೊಮ್ಮಾಯಿ

ದಾವೋಸ್’ ಪ್ರವಾಸ ಮುಗಿಸಿ ಬೆಂಗಳೂರಿಗೆ ಹಿಂದಿರುಗಿದ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು, ಮೇ 27, 2022 (www.justkannada.in): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಾವೋಸ್ ಪ್ರವಾಸ ಮುಗಿಸಿ ಇಂದು ಬೆಂಗಳೂರಿಗೆ ವಾಪಸ್ಸಾಗಿದ್ದಾರೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಬಸವರಾಜ ಬೊಮ್ಮಾಯಿ ಅವರನ್ನು ಇಂಧನ ಸಚಿವ ವಿ. ಸುನೀಲ್ ಕುಮಾರ್ ಹಾಗೂ ಗುಪ್ತಚರ ಇಲಾಖೆ ಎಡಿಜಿಪಿ ದಯಾನಂದ ಸ್ವಾಗತಿಸಿದರು.

ಮೇ 22ರಂದು ಸಿಎಂ ಬೊಮ್ಮಾಯಿ ಸ್ವಿಟ್ಜರ್‌ಲೆಂಡ್‌ಗೆ ಪ್ರಯಾಣ ಬೆಳೆಸಿದ್ದರು. ಕಳೆದ ಐದು ದಿನಗಳ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಪಾಲ್ಗೊಂಡು ರಾಜ್ಯಕ್ಕೆ ಹೂಡಿಕೆದಾರರನ್ನು ಸೆಳೆದಿದ್ದರು.

ಸಚಿವ ಮುರುಗೇಶ್ ನಿರಾಣಿ, ಐಟಿಬಿಟಿ ಸಚಿವ ಡಾ. ಸಿಎನ್. ಅಶ್ವತ್ಥ ನಾರಾಯಣ ಹಾಗೂ ಅಧಿಕಾರಿಗಳು ಮುಖ್ಯಮಂತ್ರಿ ಜತೆಗಿದ್ದರು.