ಸಚಿವ ಸಂಪುಟ ವಿಸ್ತರಣೆ?: ಫೆ.25ಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ದಿಲ್ಲಿ ಪ್ರವಾಸ

ಬೆಂಗಳೂರು, ಫೆಬ್ರವರಿ 22, 2022 (www.justkannada.in): ಬಜೆಟ್ ಮಂಡನೆಗೂ ಮುನ್ನ ಸಿಎಂ ಬಸವರಾಜ ಬೊಮ್ಮಾಯಿ ದೆಹಲಿ ಭೇಟಿ ತೀವ್ರ ಕುತೂಹಲ ಮೂಡಿಸಿದೆ. ಫೆಬ್ರವರಿ 25 ರಂದು ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಫೆ. 25 ರಂದು ಸಿಎಂ ಬೊಮ್ಮಾಯಿ ದೆಹಲಿಗೆ ಪ್ರಯಾಣ ಬೆಳಸಲಿದ್ದು, ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿಯಾಗಲಿದ್ದಾರೆ.

ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿಯಾಗಿ ಸಚಿವ ಸಂಪುಟ ವಿಸ್ತರಣೆ ಅಥವಾ ಸಂಪುಟ ಪುನಾಚರಣೆ ಕುರಿತು ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.