ಸಿಎಂ ಬಸವರಾಜ ಬೊಮ್ಮಾಯಿ ಫೋಟೋ ಶೂಟ್ ಗಾಗಿ ಮಳೆಹಾನಿ ಪ್ರದೇಶಕ್ಕೆ ಭೇಟಿ- ಬಿ.ಕೆ ಹರಿ ಪ್ರಸಾದ್ ವ್ಯಂಗ್ಯ.

ನವದೆಹಲಿ,ಜುಲೈ,14,2022(www.justkannada.in): ಸಿಎಂ ಬಸವರಾಜ ಬೊಮ್ಮಾಯಿ ಫೋಟೋ ಶೂಟ್ ಗಾಗಿ ಮಳೆಹಾನಿ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ವ್ಯಂಗ್ಯವಾಡಿದ್ದಾರೆ.

ನವದೆಹಲಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಬಿ.ಕೆ ಹರಿಪ್ರಸಾದ್, ಸಿಎಂ ಬಸವರಾಜ ಬೊಮ್ಮಾಯಿ ಅವರು ಫ್ಯಾಶನ್ ಶೋಗೆ ಮಳೆಹಾನಿ ಪ್ರದೇಶಗಳಗೆ ಭೇಟಿ ನೀಡಿದ್ದಾರೆ. ಮರವಂತೆ ಕಡಲತೀರದಲ್ಲಿ ಸಿಂ ಪೋಟೋಶೂಟ್ ನಡೆಸಿದ್ದಾರೆ. ರಾತ್ರಿ ಹೋಗಿ ಪ್ರವಾಹ ಪರಿಸ್ಥಿತಿ ಅಧ್ಯಯನ ಮಾಡಲಾಗುತ್ತಾ? ಎಂದು ಲೇವಡಿ ಮಾಡಿದರು.

ರಾಜ್ಯಾದ್ಯಂತ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ರಾಜ್ಯ ತತ್ತರಿಸಿದ್ದು  ಉಡುಪಿ, ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಪಾರ ಹಾನಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ  ಸಿಎಂ ಬಸವರಾಜ ಬೊಮ್ಮಾಯಿ ಅವರು ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

Key words: CM Basavaraja Bommai -visits -rain -damaged- area – photo shoot-BK Hari Prasad