ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಮಾಡಿ ಚರ್ಚಿಸಿದ ಸಿಎಂ ಬೊಮ್ಮಾಯಿ.

ನವದೆಹಲಿ,ಮೇ,11,2022(www.justkannada.in):  ಸಚಿವ ಸಂಪುಟ ವಿಸ್ತರಣೆ ಸೇರಿ ಹಲವು ವಿಚಾರಗಳ ಬಗ್ಗೆ ಚರ್ಚಿಸಲು ನವದೆಹಲಿಗೆ ತೆರಳಿರುವ ಸಿಎಂ ಬಸವರಾಜ ಬೊಮ್ಮಾಯಿ ಇಂದು ಕೇಂದ್ರ ಸಚಿವರನ್ನ ಭೇಟಿಯಾಗಿ ಮಾತುಕತೆ ನಡೆಸುತ್ತಿದ್ದಾರೆ.

ಈ ಮಧ್ಯೆ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನ ನಿವಾಸದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭೇಟಿಯಾಗಿ ಸುಮಾರು 45 ನಿಮಿಷಗಳ ಕಾಲ ಸುದೀರ್ಘ ಮಾತುಕತೆ ನಡೆಸಿದ್ದಾರೆ. ಈ ವೇಳೆ ಸಂಪುಟ ವಿಸ್ತರಣೆ ಬಗ್ಗೆ ಮಹತ್ವದ ಮಾತುಕತೆ ನಡೆದಿದೆ ಎನ್ನಲಾಗಿದೆ.

ಇದೇ ವೇಳೆ ಸಿಎಂ ಬೊಮ್ಮಾಯಿ ಬಳಿ ರಾಜ್ಯದ ವಿದ್ಯಮಾನಗಳ ಬಗ್ಗೆ  ಅಮಿತ್ ಶಾ ಮಾಹಿತಿ ಪಡೆದಿದ್ದಾರೆ ಎನ್ನಲಾಗಿದ್ದು,  ಅಮಿತ್ ಶಾ ಭೇಟಿ ಮಕ್ತಾಯದ ಬಳಿಕ ಸಿಎಂ ಬಸವರಾಜ  ಬೊಮ್ಮಾಯಿ  ಅವರು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನ ಭೇಟಿಯಾಗಿದ್ದಾರೆ. ಇದಕ್ಕೂ ಮೊದಲು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನ ಭೇಟಿಯಾಗಿದ್ದರು.

Key words: CM-Basvaraj Bommai-meets- Union -Home Minister -Amit Shah