Friday, October 16, 2026

Dasara Wishes

Happy Dasara
Home Front Page ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಸಿಎಂ ಬೊಮ್ಮಾಯಿ, ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರಾಗಿ ಶೋಭಾ...

ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಸಿಎಂ ಬೊಮ್ಮಾಯಿ, ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರಾಗಿ ಶೋಭಾ ಕರಂಧ್ಲಾಜೆ ನೇಮಕ.

ಬೆಂಗಳೂರು,ಮಾರ್ಚ್,10,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಬಿಜೆಪಿ ಸಕಲ ಸಿದ್ದತೆ ಮಾಡಿಕೊಳ್ಳುತ್ತಿದ್ದು ಈ ಮಧ್ಯೆ ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಮತ್ತು ಚುನಾವಣಾ ನಿರ್ವಹಣಾ ಸಮಿತಿ ರಚನೆ ಮಾಡಿದೆ.

ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಸಿಎಂ ಬಸವರಾಜ ಬೊಮ್ಮಾಯಿ‌ ಹಾಗೂ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ನೇಮಕ ಮಾಡಲಾಗಿದೆ.

25 ಜನರ ಬಿಜೆಪಿ ಚುನಾವಣಾ ಪ್ರಚಾರ ಸಮಿತಿಯಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಮಾಜಿ ಸಚಿವರಾದ ಕೆ.ಎಸ್. ಈಶ್ವರಪ್ಪ, ರಮೇಶ್ ಜಾರಕಿಹೊಳಿ ಮತ್ತು ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರಗೆ ಸ್ಥಾನ ನೀಡಲಾಗಿದೆ.

ಹಾಗೆಯೇ ಚುನಾವಣಾ ನಿರ್ವಹಣಾ ಸಮಿತಿಯಲ್ಲಿ 14 ನಾಯಕರನ್ನು ನೇಮಕ ಮಾಡಲಾಗಿದ್ದು, ಇದರಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್ ​​ ಸಹ ಸ್ಥಾನ ಪಡೆದಿದ್ದಾರೆ.

Key words: CM Bommai -appointed -BJP Election -Campaign –Committee- President,