Sunday, August 9, 2026

BDA Apartments

Home Front Page ಶಿವಮೊಗ್ಗ ನೂತನ ಏರ್ ಪೋರ್ಟ್ ಗೆ ಆಗಮಿಸಿದ ಪ್ರಧಾನಿ ಮೋದಿಗೆ  ಸಿಎಂ ಬೊಮ್ಮಾಯಿ ಸೇರಿ ಬಿಜೆಪಿ...

ಶಿವಮೊಗ್ಗ ನೂತನ ಏರ್ ಪೋರ್ಟ್ ಗೆ ಆಗಮಿಸಿದ ಪ್ರಧಾನಿ ಮೋದಿಗೆ  ಸಿಎಂ ಬೊಮ್ಮಾಯಿ ಸೇರಿ ಬಿಜೆಪಿ ನಾಯಕರಿಂದ ಸ್ವಾಗತ.

ಶಿವಮೊಗ್ಗ,ಫೆಬ್ರವರಿ,27,2023(www.justkannada.in): ಇಂದು ರಾಜ್ಯದ ಶಿವಮೊಗ್ಗ ಮತ್ತು ಬೆಳಗಾವಿ ಜಿಲ್ಲೆಗೆ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ಶಿವಮೊಗ್ಗದ ನೂತನ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು ಸಿಎಂ ಬಸವರಾಜ ಬೊಮ್ಮಾಯಿ ಸೇರಿ ಹಲವು ಬಿಜೆಪಿ ಮುಖಂಡರು ಸ್ವಾಗತಿಸಿದರು.

ದೆಹಲಿಯಿಂದ ಎಐಎಫ್ ವಿಮಾನದಲ್ಲಿ ಶಿವಮೊಗ್ಗದ ಸೋಗಾನೆಯಲ್ಲಿರುವ ನೂತನ ಏರ್ ಪೋರ್ಟ್ ಗೆ  ಆಗಮಿಸಿದ ಪ್ರಧಾನಿ ಮೋದಿ ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಚಿವರಾದ ನಾರಾಯಣ ಗೌಡ, ಭೈರತಿ ಬಸವರಾಜ್ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸ್ವಾಗತಿಸಿದರು.

ಶಿವಮೊಗ್ಗ ವಿಮಾನ ನಿಲ್ದಾಣದೊಂದಿಗೆ ಇತರೆ ಯೋಜನೆಗಳ ಕಾಮಗಾರಿಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮವನ್ನು ಪ್ರಧಾನಿ ಮೋದಿ ನೆರವೇರಿಸುವರು.  ವಿಮಾನ ನಿಲ್ದಾಣ ಲೋಕಾರ್ಪಣೆಗೆ ಹಾಗೂ ಇತರೆ ಕಾಮಗಾರಿಗಳ ಲೋಕಾರ್ಪಣೆಗೆ ಸರ್ವ ರೀತಿಯಲ್ಲಿ ಸಿದ್ದತೆ ಮಾಡಲಾಗಿದೆ.

Key words: CM Bommai – BJP leaders –welcomed- Prime Minister- Modi -Shimoga Airport.