ಉಕ್ರೇನ್ ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆ ಮಾಡಲು ವಿದೇಶಾಂಗ ಸಚಿವ ಜೈಶಂಕರ್ ಗೆ ಸಿಎಂ ಬೊಮ್ಮಾಯಿ ಮನವಿ

ಬೆಂಗಳೂರು,ಫೆಬ್ರವರಿ,25,2022(www.justkannada.in):  ಉಕ್ರೇನ್ ಮೇಲೆ ರಷ್ಯಾ ದಾಳಿ ನಡೆಸಿ ಯುದ್ಧ  ಸಾರಿರುವ ಹಿನ್ನೆಲೆ ಉಕ್ರೇನ್ ನಲ್ಲಿ ಸಿಲುಕಿರುವ ಕನ್ನಡಿಗರನ್ನ ರಕ್ಷಿಸಿ ವಾಪಸ್ ಕರೆತರಲು ಮುಂದಾಗುವಂತೆ ವಿದೇಶಾಂಗ ಸಚಿವ ಜೈ ಶಂಕರ್ ಗೆ  ಸಿಎಂ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.

ಈ ಸಂಬಂಧ ವಿದೇಶಾಂಗ ಸಚಿವ ಜೈಶಂಕರ್  ಅವರಿಗೆ ದೂರವಾಣಿ ಕರೆ ಮಾಡಿ ಚರ್ಚಿಸಿರುವ ಸಿಎಂ ಬಸವರಾಜ ಬೊಮ್ಮಾಯಿ,  ಉಕ್ರೇನ್ ನಲ್ಲಿ ಸಿಲುಕಿರುವ ಕನ್ನಡ ವಿದ್ಯಾರ್ಥಿಗಳನ್ನ ಸುರಕ್ಷಿತವಾಗಿ ವಾಪಸ್ ಕರೆತರಲು ಮನವಿ ಮಾಡಿದ್ದಾರೆ.

ಈ ವೇಳೆ ವಿದ್ಯಾರ್ಥಿಗಳನ್ನ ಸುರಕ್ಷಿತವಾಗಿ ವಾಪಸ್ ಕರೆತರುವ ಬಗ್ಗೆ ಸಿಎಂಗೆ ವಿದೇಶಾಂಗ ಸಚಿವ ಜೈ ಶಂಕರ್ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

Key words: CM Bommai-central- Minister-Jaishankar