ನಾಳೆ ಬದಲು ಸೋಮವಾರ ದೆಹಲಿಗೆ ಸಿಎಂ ಬೊಮ್ಮಾಯಿ.

ಬೆಂಗಳೂರು,ಫೆಬ್ರವರಿ,2,2022(www.justkannada.in):   ಸಿಎಂ ಬಸವರಾಜ ಬೊಮ್ಮಾಯಿ ನಾಳೆ ದೆಹಲಿಗೆ ತೆರಳಿ ಪಕ್ಷದ ವರಿಷ್ಠರನ್ನ ಭೇಟಿಯಾಗುತ್ತಾರೆ ಎನ್ನಲಾಗಿತ್ತು. ಆದರೆ ದೆಹಲಿ ಭೇಟಿಯಲ್ಲಿ ಬದಲಾವಣೆಯಾಗಿದ್ದು,  ಸೋಮವಾರ ಸಿಎಂ ಬೊಮ್ಮಾಯಿ ದೆಹಲಿಗೆ  ತೆರಳಲಿದ್ದಾರೆ.

ನಾಳೆ ಪ್ರಧಾನಿ ನರೇಂದ್ರ ಮೋದಿ ಭೇಟಿಗೆ ಸಮಯ ಕೇಳಿದ್ದ ಸಿಎಂ ಬೊಮ್ಮಾಯಿ, ಸಮಯ ನೀಡಿದರೆ ನಾಳೆ ದೆಹಲಿಗೆ ತೆರಳುತ್ತಾರೆ. ದೆಹಲಿಗೆ ಹೋದರೆ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಬಗ್ಗೆ ಚರ್ಚೆ ನಡೆಸಬಹುದು. ಅಂತಾರಾಜ್ಯ ಜಲ ವಿವಾದಗಳ ಬಗ್ಗೆಯೂ ಚರ್ಚೆ ನಡೆಸುವ ಸಾಧ್ಯತೆಯಿದೆ ಎನ್ನಲಾಗಿತ್ತು.

ಆದರೆ ಸಿಎಂ ಬಸವರಾಜ ಬೊಮ್ಮಾಯಿ ಸೋಮವಾರ ದೆಹಲಿಗೆ ತೆರಳಲಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ನಾಳೆ ದೆಹಲಿಗೆ ಹೋಗಲು ನಿರ್ಧರಿಸಿದ್ದೆ ಸಂಸದರ ಮನವಿ ಮೇರೆಗೆ ಸೋಮವಾರ ತೆರಳುವೆ. ದೆಹಲಿಯಲ್ಲಿ ರಾಜ್ಯ ಸಂಸದರ ಸಭೆ ಇದೆ. ಸೋಮವಾರ ಬೆಳಗ್ಗೆ ದೆಹಲಿಗೆ ಹೋಗುತ್ತೇನೆ ಎಂದಿದ್ದಾರೆ.

ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ಬಜೆಟ್ ಬಗ್ಗೆ ಗೊಂದಲವೇನಿಲ್ಲ. ರಾಜ್ಯದಲ್ಲೂ ಬಜೆಟ್ ಬಗ್ಗೆ ಬೇರೆ ಬೇರೆ ಇಲಾಖೆ ಜೊತೆಗೆ ಮಾತನಾಡುತ್ತಿದ್ದೇನೆ. ಎಲ್ಲರ ಅಭಿಪ್ರಾಯ ತೆಗೆದುಕೊಂಡು ಬಜೆಟ್ ಮಾಡುತ್ತೇವೆ. ಸಂಸದರ ಜೊತೆ ಬಜೆಟ್ ಪೂರ್ವ ಸಭೆ ಮಾಡಿ ಚರ್ಚೆ ಮಾಡಲಾಗುವುದು ಎಂದರು.

Key words: CM Bommai – Delhi – Monday