ಇಂದು ದೆಹಲಿಗೆ ಸಿಎಂ ಬೊಮ್ಮಾಯಿ: ಹಲವು ವಿಚಾರ ಚರ್ಚೆ ಸಾಧ್ಯತೆ.

ಬೆಳಗಾವಿ,ಡಿಸೆಂಬರ್,26,2022(www.justkannada.in):  ಸಚಿವ ಸಂಪುಟ ವಿಸ್ತರಣೆ ಸೇರಿ ಹಲವು ವಿಚಾರಗಳ ಬಗ್ಗೆ ಚರ್ಚಿಸಲು  ಸಿಎಂ ಬಸವರಾಜ ಬೊಮ್ಮಾಯಿ ಇಂದು ದೆಹಲಿಗೆ ತೆರಳಲಿದ್ದಾರೆ ಎನ್ನಲಾಗುತ್ತಿದೆ.

ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಈಗಾಗಲೇ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದ್ದು, ಇಂದು ದೆಹಲಿ ಪ್ರವಾಸ ಕೈಗೊಳ್ಳಲಿದ್ದು, ವರಿಷ್ಠರನ್ನು ಭೇಟಿಯಾಗಿ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

ಇಂದು ಸಂಜೆ 4.30ರ ವೇಳೆಗೆ ದೆಹಲಿಗೆ ತೆರಳಲಿರುವ ಸಿಎಂ ಬೊಮ್ಮಾಯಿ  ಇಂದು ಅಲ್ಲೇ ವಾಸ್ತವ್ಯ ಹೂಡಿ ಹೈಕಮಾಂಡ್ ಭೇಟಿ ಮಾಡಿ ಸಚಿವ ಸಂಪುಟ ವಿಚಾರ, ಮೀಸಲಾತಿ ಬೇಡಿಕೆ ವಿಚಾರ ಸೇರಿ ಹಲವು ವಿಚಾರಗಳನ್ನ ಚರ್ಚಿಸಿ ನಾಳೆ ಮತ್ತೆ ದೆಹಲಿಯಿಂದ ಬೆಳಗಾವಿಗೆ ವಾಪಸ್ ಆಗಿ ಅಧಿವೇಶನದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Key words: CM Bommai – Delhi -today.