ನಾಳೆ ಸಿಎಂ ಬೊಮ್ಮಾಯಿ ದೆಹಲಿಗೆ: ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಸಾಧ್ಯತೆ..

ಬೆಂಗಳೂರು,ನವೆಂಬರ್,4,2022(www.justkannada.in):  ಸಚಿವ ಸಂಪುಟ  ವಿಸ್ತರಣೆಗಾಗಿ ಕಾದು ಕುಳಿತಿರುವ ಸಚಿವಾಕಾಂಕ್ಷಿಗಳಿಗೆ ಸಿಹಿ ಸುದ್ಧಿ ಸಿಗುವ ಸಾಧ್ಯತೆ ಇದೆ. ಹೌದು ನಾಳೆ  ಸಿಎಂ ಬಸವರಾಜ ಬೊಮ್ಮಾಯಿ ದೆಹಲಿಗೆ ತೆರಳಲಿದ್ದಾರೆ ಎಂದು ಹೇಳಲಾಗುತ್ತಿದೆ.

ನಾಳೆ ಸಂಜೆ ಸಿಎಂ ಬಸವರಾಜ ಬೊಮ್ಮಾಯಿ ದೆಹಲಿಗೆ ತೆರಳುವ ಸಾಧ್ಯತೆ ಇದೆ. ಭಾನುವಾರ ಹೈಕಮಾಂಡ್ ನಾಯಕರನ್ನ ಭೇಟಿ ಮಾಡಲಿರುವ ಸಿಎಂ ಬೊಮ್ಮಾಯಿ  ಸಚಿವ ಸಂಪುಟ ವಿಸ್ತರಣೆ ಬಗ್ಗೆ  ಚರ್ಚೆ ಮಾಡುವ  ಸಾಧ್ಯತೆ ಇದೆ ಎನ್ನಲಾಗಿದೆ.

ಮುಂದಿನ ಏಳೇಂಟು ತಿಂಗಳಲ್ಲಿ ರಾಜ್ಯ ವಿಧಾನಸಭಾ ಚುನಾವಣೆ ನಡೆಯುವ ಸಾಧ್ಯತೆ ಇದೆ. ಹೀಗಾಗಿ ಸಂಪುಟ ವಿಸ್ತರಣೆಗೆ ಹಲವು ಶಾಸಕರು ಒತ್ತಡ ಹೇರುತ್ತಿದ್ದು ಈ ತಿಂಗಳೊಳಗೆ ಸಂಪುಟ ವಿಸ್ತರಣೆಯಾಗುತ್ತಾ ಕಾದು ನೋಡಬೇಕಿದೆ.

Key words:   CM Bommai – Delhi- tomorrow-Discussion –cabinet  expansion