Monday, October 12, 2026

Dasara Wishes

BJP DasraWishes_JK DasraWishes JK
Happy Dasara
Home Cinema ಅಪ್ಪುಗೆ ಹೊದಿಸಿದ್ದ ರಾಷ್ಟ್ರ ಧ್ವಜವನ್ನು ಕುಟುಂಬಕ್ಕೆ ಹಸ್ತಾಂತರಿಸಿದ ಸಿಎಂ ಬೊಮ್ಮಾಯಿ

ಅಪ್ಪುಗೆ ಹೊದಿಸಿದ್ದ ರಾಷ್ಟ್ರ ಧ್ವಜವನ್ನು ಕುಟುಂಬಕ್ಕೆ ಹಸ್ತಾಂತರಿಸಿದ ಸಿಎಂ ಬೊಮ್ಮಾಯಿ

ಬೆಂಗಳೂರು, ಅಕ್ಟೋಬರ್ 31, 2021 (www.justkannada.in): ಭದ್ರತಾ ಕಾರಣಗಳು ಹಿನ್ನೆಲೆಯಲ್ಲಿ ಕುಟುಂಬಸ್ಥರ ಸಹಮತಿ ಪಡೆದು ಪ್ರಕಟಿಸಿದ ಸಮಯಕ್ಕೆ ಮೊದಲೇ ಶುಕ್ರವಾರ ಹಠಾತ್ ನಿಧನರಾದ ಈ ಯುವ ನಟನ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು.

ಮೊದಲು ಗಣ್ಯಾತಿ ಗಣ್ಯರು ಪುನೀತ್ ರಾಜಕುಮಾರ್ ಅವರ ಪಾರ್ಥಿವ ಶರೀರದ ಮೇಲೆ ಪುಷ್ಪ ಗುಚ್ಛ ಅರ್ಪಿಸಿದ ನಂತರ ಪೊಲೀಸ್ ವಾದ್ಯಗೋಷ್ಠಿಯಿಂದ ರಾಷ್ಟ್ರ ಗೀತೆ ಮೊಳಗಿತು. ಪೊಲೀಸರು ಮೂರು ಬಾರಿ ಕುಶಾಲ ತೋಪು ಸಿಡಿಸಿದರು. ತದ ನಂತರ, ಎರಡು ನಿಮಿಷಗಳ ಮೌನ ಆಚರಿಸಲಾಯಿತು.

ಇದಾದ ಕೂಡಲೇ, ಪುನೀತ್ ರಾಜಕುಮಾರ್ ಅವರ ದೇಹದ ಮೇಲೆ ಹೊದಿಸಿದ್ದ ರಾಷ್ಟ್ರ ಧ್ವಜವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪುನೀತ್ ರಾಜಕುಮಾರ್ ಅವರ ಪತ್ನಿ ಅಶ್ವಿನಿ ಅವರಿಗೆ ಹಸ್ತಾಂತರಿಸಿದರು.

ಪೊಲೀಸರು ಮೊಳಗಿಸಿದ ಶೋಕ ಗೀತೆ ಹಾಗೂ ರಾಷ್ಟ್ರ ಗೀತೆಯ ನಂತರ ಅಗಲಿದ ನಟನಿಗೆ ಸರ್ಕಾರದ ಗೌರವ ಸಮರ್ಪಣಾ ಕಾರ್ಯಕ್ರಮ ಪೂರ್ಣಗೊಂಡಿತು.