ರಾಮನಗರದಲ್ಲಿ ಸಿಎಂ ಬೊಮ್ಮಾಯಿ ಮಳೆಹಾನಿ ಪರಿಶೀಲನೆ; ಹೆಚ್.ಡಿಕೆ ಸಾಥ್.

0
2

ರಾಮನಗರ,ಆಗಸ್ಟ್,29,2022(www.justkannada.in): ರಾಮನಗರ ಜಿಲ್ಲೆಯಾದ್ಯಂತ ಎಡೆಬಿಡದೆ ಮಳೆ ಸುರಿಯುತ್ತಿದ್ದು,  ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವಾರು ಗ್ರಾಮಗಳು ಜಲಾವೃತಗೊಂಡು ಜನ ಪರದಾಡುತ್ತಿದ್ದಾರೆ.

ಈ ನಡುವೆ ಬೆಳಿಗ್ಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಸಿಎಂ ಬಸವರಾಜ ಬೊಮ್ಮಾಯಿ ಅವರು ರಾಮನಗರಕ್ಕೆ ಭೇಟಿ ನೀಡಿ ನೆರೆಹಾನಿ ಪರಿಶೀಲನೆ ನಡೆಸಿದ್ದಾರೆ.  ಸಿಎಂ ಬೊಮ್ಮಾಯಿಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಸಚಿವರಾದ ಅಶ್ವಥ್ ನಾರಾಯಣ್, ಆರ್.ಅಶೋಕ್ ಸಾಥ್ ನೀಡಿದ್ದಾರೆ.

ಟಿಪ್ಪು ಕಾಲೋನಿ, ಬಸವನಪುರ ಸೇರಿ ಹಲವು ಕಡೆಗಳಲ್ಲಿ ಭೇಟಿ ನೀಡಿ ಸಿಎಂ ಬಸವರಾಜ ಬೊಮ್ಮಾಯಿ, ಮಳೆಹಾನಿ ಅವ್ಯವಸ್ಥೆ ಪರಿಶೀಲಿಸಿದರು.

ಬಳಿಕ ಮಾತನಾಡಿದ  ಅವರು, ರಾಜ್ಯ ಸರ್ಕಾರದಿಂದಲೇ ಮಳೆ ನೀರು ಹರಿದು ಹೋಗುವಂತೆ ವ್ಯವಸ್ಥೆ ಮಾಡುತ್ತೇವೆ. ಹೆದ್ದಾರಿಯ ಹಲವೆಡೆ ಕಾಲುವೆ ಮುಚ್ಚಿದ್ದರಿಂದ ಸಮಸ್ಯೆಯಾಗಿದೆ. ರಾಮನಗರದಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಲು ಕಾಲುವೆ ಮುಚ್ಚಿದ್ದೆ ಕಾರಣ. ಕಾಲುವೆ ತೆರವುಗೊಳಿಸಲು ಹೆದ್ದಾರಿ ಪ್ರಾಧಿಕಾರಕ್ಕೆ ಸೂಚನೆ ನೀಡಲಾಗುತ್ತದೆ ಎಂದರು.

Key words: CM Bommai- inspects –rain- damage -Ramanagara