ಚುನಾವಣಾ ಅಕ್ರಮದಲ್ಲಿ ಸಿಎಂ ಬೊಮ್ಮಾಯಿ ಭಾಗಿ: ಕೂಡಲೇ ರಾಜೀನಾಮೆ ನೀಡಿ- ರಣದೀಪ್ ಸುರ್ಜೇವಾಲ ಆಗ್ರಹ.

ಬೆಂಗಳೂರು,ನವೆಂಬರ್,17,2022(www.justkannada.in):  ಬಿಪಿಎಂಪಿ ಮತ್ತು  ಸಿಎಂ ಸೇರಿಕೊಂಡು  ಮತದಾರರ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಈ ಮೂಲಕ ಸಿಎಂ ಬೊಮ್ಮಾಯಿ ಚುನಾವಣಾ ಅಕ್ರಮದಲ್ಲಿ ತೊಡಗಿದ್ದು ಕೂಡಲೇ ರಾಜೀನಾಮೆ ನೀಡಬೇಕು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಆಗ್ರಹಿಸಿದ್ದಾರೆ.

ಮಾಧ್ಯಮಗಳ ಜೊತೆ ಇಂದು ಮಾತನಾಡಿದ ರಣದೀಪ್ ಸಿಂಗ್ ಸುರ್ಜೇವಾಲ, ರಾಜ್ಯ ಸರ್ಕಾರ ಜನರ ಹಣ ದೋಚಿದೆ ಎಲ್ಲದರಲ್ಲೂ ಭ್ರಷ್ಟಚಾರ ಮುಗಿಲು ಮುಟ್ಟಿದೆ. ಸರ್ಕಾರ ಮತದಾರರ ಮಾಹಿತಿ ಕದಿಯುತ್ತಿದೆ. ಅಕ್ರಮದ ಉದ್ದೇಶಕ್ಕಾಗಿ ಮತದಾರರ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ. ಈ ಮೂಲಕ ಜನರ ಮತದಾನದ ಹಕ್ಕು ಕಸಿಯುವ ಹುನ್ನಾರ ನಡೆಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಚುನಾವಣಾ ಪ್ರಕ್ರಿಯೆಯಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ.  ಬಿಬಿಎಂಪಿ ಹಾಗೂ ಸಿಎಂ ಸೇರಿಕೊಂಡು ಮತದಾರರ ಮಾಹಿತಿ ಸಂಗ್ರಹಿಸುತ್ತಿದ್ದು ಸಿಎಂ ಬೊಮ್ಮಾಯಿ ಕೂಡಲೇ ರಾಜೀನಾಮೆ ನೀಡಲಿ ಚುನಾವಣಾ ಆಯೋಗ ಸಿಎಂ ವಿರುದ್ದ ಕ್ರಮ ಕೈಗೊಳ್ಳಲಿ ಎಂದು ರಣದೀಪ್ ಸಿಂಗ್ ಸುರ್ಜೇವಾಲ ಒತ್ತಾಯಿಸಿದರು.

Key words: CM Bommai-involved –election- illegal- Randeep singh Surjewala