ಜಿಲ್ಲಾಧಿಕಾರಿಗಳ ಜತೆ ಸಿಎಂ ಬೊಮ್ಮಾಯಿ ಸಭೆ; ಸಚಿವರು ಭಾಗಿ.

ಬೆಂಗಳೂರು,ಡಿಸೆಂಬರ್,31,2021(www.justkannada.in):  ರಾಜ್ಯದ ಜಿಲ್ಲಾಧಿಕಾರಿಗಳು ಜೊತೆ ಸಿಎಂ ಬಸವರಾಜ ಬೊಮ್ಮಾಯಿ ಸಭೆ ನಡೆಸುತ್ತಿದ್ದು ಜಿಲ್ಲಾ ಮಟ್ಟದ ಆಡಳಿತಾತ್ಮಕ ವಿಚಾರಗಳ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ.

ವಿಧಾನಸೌಧದಲ್ಲಿ ಜಿಲ್ಲಾಧಿಕಾರಿಗಳ ಜತೆ ಸಿಎಂ ಬೊಮ್ಮಾಯಿ ಸಭೆ ನಡೆಸುತ್ತಿದ್ದು ಸಚವರಾದ ಆರ್.ಅಶೋಕ್ ನಾರಾಯಣಗೌಡ ಎಂಟಿಬಿ ನಾಗರಾಜ್, ಕೋಟಾ ಶ್ರೀನಿವಾಸ್ ಪೂಜಾರಿ ಭಾಗಿಯಾಗಿದ್ದಾರೆ.

ಸಭೆಯಲ್ಲಿ ಕೋವಿಡ್ ನಿರ್ವಹಣೆ, ಯೋಜನೆಗಳ ಜಾರಿ, ಪರಿಹಾರ ಸೇರಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ.   ಜಿಲ್ಲಾ ಮಟ್ಟದ ಆಡಳಿತಾತ್ಮಕ ವಿಚಾರಗಳ ಬಗ್ಗೆ ಚರ್ಚೆಯಾಗುತ್ತಿದ್ದು, ಜನರ ಹತ್ತಿರ ಆಡಳಿತ ಕೊಂಡೊಯ್ಯುವ ಪ್ರಯತ್ನ ಈ ಸಂಬಂಧ ಬರುವ ದಿನಗಳಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳುವ ಕುರಿತು ಸಿಎಂ ಬೊಮ್ಮಾಯಿ ಚಿಂತಿಸಿದ್ದಾರೆ.

Key words: CM Bommai –meeting- with -DC