ಉಕ್ರೇನ್’ನಲ್ಲಿ ಮೃತಪಟ್ಟ ನವೀನ್ ಮೃತದೇಹ 21ರಂದು ರಾಜ್ಯಕ್ಕೆ: ಸಿಎಂ ಬೊಮ್ಮಾಯಿ ಮಾಹಿತಿ

ಬೆಂಗಳೂರು, ಮಾರ್ಚ್ 19, 2022 (www.justkannada.in): ಉಕ್ರೇನ್ ನಲ್ಲಿ ಮೃತಪಟ್ಟಿದ್ದ ವೈದ್ಯಕೀಯ ವಿದ್ಯಾರ್ಥಿ ನವೀನ್ ಮೃತದೇಹ ಮಾ.21 ಕ್ಕೆ ರಾಜ್ಯಕ್ಕೆ ಬರಲಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ಉಕ್ರೇನ್-ರಷ್ಯಾ ಯುದ್ಧದಲ್ಲಿ ರಷ್ಯಾ ನಡೆಸಿದ ದಾಳಿಯಲ್ಲಿ ಉಕ್ರೇನ್ ನಲ್ಲಿ ವೈದ್ಯಕೀಯ ವಿದ್ಯಾಭ್ಯಾಸ ಮಾಡುತ್ತಿದ್ದ ನವೀನ್ ಬಲಿಯಾಗಿದ್ದರು.

ಮೃತರ ಕುಟುಂಬಕ್ಕೆ ಸರಕಾರ ನೆರವು ಘೋಷಿಸಿ ಮೃತದೇಹವನ್ನು ಭಾರತಕ್ಕೆ ತರಲು ಕ್ರಮ ವಹಿಸುವುದಾಗಿ ಹೇಳಿತ್ತು. ಅದರಂತೆ ನವೀನ್ ಮೃತದೇಹವನ್ನು ಮಾ.21ಕ್ಕೆ ತರಲಾಗುತ್ತಿದೆ ಎಂದು ಸಿಎಂ ಬೊಮ್ಮಾಯಿ ಮಾಹಿತಿನೀಡಿದ್ದಾರೆ.