Thursday, October 15, 2026

Dasara Wishes

ಮತ್ತೊಂದು ಬಹುಕೋಟಿ ವಂಚನೆ ಬಯಲು: ಗ್ರಾಹಕರಿಂದ ಹಣ ಸಂಗ್ರಹಿಸಿ ವಂಚಕರು ಪರಾರಿ...
Happy Dasara
Home Front Page ಕರಾವಳಿ ಪ್ರದೇಶಕ್ಕೆ ಪಡಿತರದಲ್ಲಿ ಕುಚಲಕ್ಕಿ: ಪಿಎಂಗೆ ಧನ್ಯವಾದ ತಿಳಿಸಿದ ಸಿಎಂ ಬೊಮ್ಮಾಯಿ

ಕರಾವಳಿ ಪ್ರದೇಶಕ್ಕೆ ಪಡಿತರದಲ್ಲಿ ಕುಚಲಕ್ಕಿ: ಪಿಎಂಗೆ ಧನ್ಯವಾದ ತಿಳಿಸಿದ ಸಿಎಂ ಬೊಮ್ಮಾಯಿ

ಬೆಂಗಳೂರು, ಜನವರಿ 09, 2021 (www.justkannada.in): ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕರಾವಳಿ ಪ್ರದೇಶಕ್ಕೆ ಪಡಿತರದಲ್ಲಿ ಕುಚಲಕ್ಕಿ ವಿತರಣೆ ಮಾಡಲು ಆದೇಶಿಸಿದೆ.

ಕೇಂದ್ರ ಸರ್ಕಾರದಿಂದ ರಾಜ್ಯ ಸರಕಾರಕ್ಕೆ ನೀಡುವ ಪಡಿತರ ಸಂಬಂಧಿತ ಧಾನ್ಯಗಳ ವಿತರಣೆಯಲ್ಲಿ ಕುಚಲಕ್ಕಿ ಸೇರಿಸಲು ಅವರು ಆದೇಶ ನೀಡಿದ್ದಾರೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಬರೆದ ಪತ್ರಕ್ಕೆ ಕೇಂದ್ರ ಸಚಿವ ಪಿಯೂಷ್ ಗೋಯಲ್ ಶೀಘ್ರ ಸ್ಪಂದಿಸಿದ್ದಾರೆ.

ರಾಜ್ಯದ ಕರಾವಳಿಯಲ್ಲಿನ ಪಡಿತರದಲ್ಲಿ ಕುಚಲಕ್ಕಿ ಸೇರಿಸುವಂತೆ ಕೇಂದ್ರ ಸರ್ಕಾರ ನೀಡಿರುವ ಆದೇಶಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ಸಂತಸ ವ್ಯಕ್ತಪಡಿಸಿದ್ದಾರೆ.

‘ಪಡಿತರದಲ್ಲಿ ವಿತರಿಸಲು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬೆಳೆದ ಕುಚಲಕ್ಕಿ ನೀಡಲು ಒಪ್ಪಿಕೊಂಡಿರುವ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾಕ್ಕೆ ಧನ್ಯವಾದಗಳು. ಸ್ಥಳೀಯ ಉತ್ಪನ್ನಗಳಿಗೆ ಬೆಂಬಲ ನೀಡುವ ಜೊತೆಗೆ ಫಲಾನುಭವಿಗಳಿಗೆ ಅವರ ಆಯ್ಕೆಯ ಆಹಾರ ನೀಡುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆ’ ಎಂದು ಟ್ವಿಟ್ಟರ್ ನಲ್ಲಿ ಸಿಎಂ ಹೇಳಿದ್ದಾರೆ.