Sunday, August 23, 2026

BDA Apartments

Home Front Page ಇಂದು ದಿಢೀರ್ ದೆಹಲಿಗೆ ಸಿಎಂ ಬೊಮ್ಮಾಯಿ.

ಇಂದು ದಿಢೀರ್ ದೆಹಲಿಗೆ ಸಿಎಂ ಬೊಮ್ಮಾಯಿ.

ಬೆಂಗಳೂರು,ಮೇ,20,2022(www.justkannada.in): ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇಂದು ಮಧ್ಯಾಹ್ನ ದಿಢೀರ್ ದೆಹಲಿಗೆ ಪ್ರವಾಸ ಕೈಗೊಂಡಿದ್ದಾರೆ.

ಹೈಕಮಾಂಡ್ ಬುಲಾವ್ ನೀಡಿದ್ದು ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇಂದು ಮಧ್ಯಾಹ್ನ ದೆಹಲಿಗೆ ತೆರಳಲಿದ್ದಾರೆ.  ಭಾರಿ ಮಳೆಯಿಂದಾಗಿ ತತ್ತರಿಸಿರುವ ರಾಜಧಾನಿ ಬೆಂಗಳೂರಿನ  ಮಳೆ ಪೀಡಿತ ಪ್ರದೇಶಗಳಲ್ಲಿ ಸಿಎಂ ಬೊಮ್ಮಾಯಿ ಭೇಟಿ ನೀಡಿ ಪರಿಶೀಲನೆ ಕೈಗೊಂಡರು.  ಈ ವೇಳೆ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಹೈಕಮಾಂಡ್ ದೆಹಲಿಗೆ ಬರುವಂತೆ ಬುಲಾವ್ ನೀಡಿದಾರೆ ಎನ್ನಲಾಗಿದೆ.

ರಾಜ್ಯಸಭೆ, ವಿಧಾನಪರಿಷತ್ ಚುನಾವಣೆ ಹಾಗೂ ಸಚಿವ ಸಂಪುಟ ವಿಸ್ತರಣೆ ವಿಚಾರಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ. ಸಿಎಂ ಬೊಮ್ಮಾಯಿ ಈಗಾಗಲೇ ಹಲವು ಬಾರಿ ಸಿಎಂ ದೆಹಲಿಗೆ ತೆರಳಿದ್ದರೂ, ವರಿಷ್ಠರನ್ನು ಭೇಟಿಯಾಗಿದ್ದರೂ ಕೂಡ ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆಗೆ ಯಾವುದೇ ಅನುಮತಿ ಸಿಕ್ಕಿರಲಿಲ್ಲ. ಈ ಹಿನ್ನೆಲೆಯಲ್ಲಿ ಇಂದಿನ ಭೇಟಿ ಮಹತ್ವ ಪಡೆದುಕೊಳ್ಳಲಿದೆ.

Key words: CM Bommai-today – Delhi-cabinet