ಮಡಿಕೇರಿಯ ಮಳೆಹಾನಿ ಪ್ರದೇಶಕ್ಕೆ ಸಿಎಂ ಬೊಮ್ಮಾಯಿ ಭೇಟಿ: ಪರಿಹಾರದ ಚೆಕ್ ವಿತರಣೆ.

ಮಡಿಕೇರಿ,ಜುಲೈ,12,2022(www.justkannada.in): ರಾಜ್ಯದಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರವಾಸ ಕೈಗೊಂಡಿದ್ದು, ಇಂದು ಮಡಿಕೇರಿಗೆ ಭೇಟಿ ನೀಡಿ ಮಳೆಹಾನಿ ಸಂತ್ರಸ್ತರಿಗೆ ಪರಿಹಾರದ ಚೆಕ್ ವಿತರಿಸಿದರು.

ಮಡಿಕೇರಿಯ ಮಲ್ಲಿಕಾರ್ಜುನ ನಗರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ನೆರೆ ಪರಿಶೀಲನೆ ನಡೆಸಿದರು. ಈ ವೇಳೆ ಸಿಎಂ ಬೊಮ್ಮಾಯಿಗೆ ಶಿಕ್ಷಣ ಸಚಿವ ಬಿ.ಸಿ ನಾಗೇಶ್, ಕಂದಾಯ ಸಚಿವ ಆರ್.ಅಶೋಕ್ ಸಾಥ್ ನೀಡಿದರು. ಸಂತ್ರಸ್ತರ ಸಮಸ್ಯೆ ಆಲಿಸಿದ ಸಿಎಂ, ಪರಿಹಾರ ಕಾರ್ಯ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಇನ್ನು ನೆರೆ ಸಂತ್ರಸತರಿಗೆ ಪರಿಹಾರ ಚೆಕ್ ವಿತರಣೆ ಮಾಡಿದರು. 1 ಲಕ್ಷ ರೂ. ಚೆಕ್ ವಿತರಣೆ ಮಾಡಿದರು.

Key words: CM Bommai –visits- Madikeri- rain- affected- area.