ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಸಿಎಂ ಬಿಎಸ್ ವೈ ಹೇಳಿದ್ದೇನು ಗೊತ್ತೆ…?

ಬೆಂಗಳೂರು,ಏಪ್ರಿಲ್,22,2021( www.justkannada.in):  ಕೊರೊನಾ ದಿನೇ ದಿನೇ ಉಲ್ಬಣಗೊಳ್ಳುತ್ತಿದೆ. ಒಂದು ಮನೆಯಲ್ಲಿ ಮೂರರಿಂದ ನಾಲ್ಕು ಜನರಲ್ಲಿ ಕೊರೊನಾ ಕಾಣಿಸಿಕೊಳ್ಳುತ್ತಿದೆ. ಈಗಾಗಲೇ ಪ್ರಧಾನಿಯವರು ಸೂಚಿಸಿದ್ದಾರೆ. ಕಡ್ಡಾಯವಾಗಿ ಮಾಸ್ಕ್ ಧರಿಸುವುದು. ಸ್ಯಾನಿಟೈಸ್ ಮಾಡಿಕೊಳ್ಳುವುದು. ಅಂತರ ಕಾಯ್ದುಕೊಳ್ಳುವುದು. ಇದು ಬಿಟ್ಟು ಬೇರೆ ಯಾವ ಮಾರ್ಗ ಇಲ್ಲ ಕೊರೊನಾ ತಡೆಯಲು. ರಾಜ್ಯದ ಜನರಲ್ಲಿ ಕೈ ಜೋಡಿಸಿ ಪ್ರಾರ್ಥನೆ ಮಾಡುತ್ತೇನೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ರಾಜ್ಯದ ಜನತೆಯಲ್ಲಿ ಮನವಿ ಮಾಡಿದರು.jk

ಕೊರೋನಾ ಸೋಂಕಿನಿಂದ ಗುಣಮುಖರಾಗಿ ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಿಎಸ್ ವೈ, ದಯಮಾಡಿ ಅನಗತ್ಯವಾಗಿ ಮನೆ ಬಿಟ್ಟು ಹೊರಗೆ ಬರಬೇಡಿ. ಇದರಿಂದಲೇ ಕೊರೊನಾ ಉಲ್ಬಣಗೊಳ್ಳುತ್ತಿದೆ. ಕಂಟ್ರೋಲ್ ಮಾಡೋಕೆ ಆಗದ ಸ್ಥಿತಿಗೆ ಬಂದು ತಲುಪಿದ್ದೇವೆ. ಇನ್ನಾದರೂ ಅನಗತ್ಯ ವಾಗಿ ಮನೆ ಬಿಟ್ಟು ಹೊರಗೆ ಬರಬೇಡಿ. ಈಗಾಗಲೇ ಸಾಕಷ್ಟು ಬಿಗಿ ಕ್ರಮ ತೆಗೆದುಕೊಂಡಿದ್ದೇವೆ. ಅನಗತ್ಯವಾಗಿ ಪೊಲೀಸರು ದಂಡ ಹಾಕಿ ಬಿಗಿ ಪರಿಸ್ಥಿತಿ ನಿರ್ಮಾಣ ಆಗೋದಕ್ಕೆ ಅವಕಾಶ ಮಾಡಿಕೊಡದೇ ಸಾರ್ವಜನಿಕರ ಹಿತದೃಷ್ಟಿಯಿಂದ ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡುತ್ತೇನೆ ಎಂದರು.CM BS Yeddyurappa-after - discharge - hospital.

ನಾನು ಆರೋಗ್ಯವಾಗಿ ಬಂದಿದ್ದೇನೆ. ಇಂದು ಸಚಿವ ಸಂಪುಟದ ಸಹೋದ್ಯೋಗಿಗಳ ಸಭೆಯನ್ನೂ ಕರೆದಿದ್ದೇನೆ. ನಾವೆಲ್ಲರೂ ನಮ್ಮ ನಮ್ಮ ಜಿಲ್ಲೆಗೆ ಹೋಗಿ ಕೂತು ಕೋವಿಡ್ ತಡೆಯೋದಕ್ಕೆ ಸಚಿವರು ಏನೆಲ್ಲಾ ಮಾಡಬೇಕೆಂದು ತಿಳಿಸಿದ್ದೇವೆ. ಕಳೆದ ನಾಲ್ಕು ದಿನಗಳಿಂದ ಎಲ್ಲಾ ಸಚಿವರೊಂದಿಗೆ ಸತತ ಸಂಪರ್ಕದಲ್ಲಿ ಇದ್ದೇನೆ. ಇಂದು ಎಲ್ಲರೂ ಕೂತು ಚರ್ಚೆ ಮಾಡಿ ವಾಸ್ತವತೆಯನ್ನು ತಿಳಿದುಕೊಂಡು ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಬಿಎಸ್ ವೈ ಹೇಳಿದರು.

Key words: CM BS Yeddyurappa-after – discharge – hospital.