50 ಸಾವಿರ ಕೋಟಿ ಪರಿಹಾರಕ್ಕೆ ಮನವಿ ಮಾಡಿದ ಸಿಎಂ: ಮೌನಕ್ಕೆ ಜಾರಿದ ಪ್ರಧಾನಿ ಮೋದಿ….

ತುಮಕೂರು,ಜ,2,2019(www.justkannada.in):  ಭೀಕರ ಪ್ರವಾಹದಿಂದ ರಾಜ್ಯ ತತ್ತರಿಸಿದ್ದು, 30 ಸಾವಿರ ಕೋಟಿ ನಷ್ಟ ಉಂಟಾಗಿದೆ. ಹೀಗಾಗಿ 50 ಸಾವಿರ ವಿಶೇಷ ಅನುದಾನ ಬಿಡುಗಡೆ ಮಾಡಬೇಕು ಎಂದು ಸಿಎಂ ಬಿಎಸ್ ಯಡಿಯೂರಪ್ಪ ಸಲ್ಲಿಸಿದ ಮನವಿಗೆ ಪ್ರಧಾನಿ ಮೋದಿ ಮೌನಕ್ಕೆ ಜಾರಿದರು.

 ಹೌದು, ಇಂದು ತುಮಕೂರಿನ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಕೃಷಿ ಸಮ್ಮಾನ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ  ಪ್ರಧಾನಿ ನರೇಂದ್ರ ಮೋದಿ ಪ್ರಗತಿಪರ ರೈತರಿಗೆ ಕೃಷಿ ಕರ್ಮಣ್ ಪ್ರಶಸ್ತಿ ಪ್ರದಾನ ಮಾಡಿದರು.

ಇನ್ನು ಕಾರ್ಯಕ್ರಮದಲ್ಲಿ ಮಾತನಾಡುತ್ತ ಅನುದಾನದ ಬಗ್ಗೆ ವೇದಿಕೆಯಲ್ಲೆ ಪ್ರಸ್ತಾಪಿಸಿದ ಸಿಎಂ ಬಿಎಸ್ ಯಡಿಯೂರಪ್ಪ, ‘ಕರ್ನಾಟಕ ನೆರೆಯಿಂದ ತತ್ತರಿಸಿದೆ. ಇದರಿಂದ 30 ಸಾವಿರ ಕೋಟಿಗೂ ಮಿಗಿಲಾದ ನಷ್ಟವಾಗಿದೆ. ಆದರೆ ಸೂಕ್ತ ಪರಿಹಾರ ಬಂದಿಲ್ಲ. ಪ್ರಧಾನಿ ಮೋದಿ ಅವರನ್ನ ಹಲವು ಬಾರಿ ಭೇಟಿ ಮಾಡಿ ಹೆಚ್ಚುವರಿ ಅನುದಾನಕ್ಕೆ ಮನವಿ ಮಾಡಿದ್ದೇ. ಅದ್ರೆ ಅನುದಾನ ಬಿಡುಗಡೆ ಮಾಡಿಲ್ಲ. ಹೀಗಾಗಿ ರಾಜ್ಯಕ್ಕೆ 50 ಸಾವಿರ ಕೋಟಿ ವಿಶೇಷ ಅನುದಾನ ಬಿಡುಗಡೆ ಮಾಡಿ ಎಂದು ಮನವಿ ಮಾಡಿದರು.

ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ಅರ್ಧಗಂಟೆಗೂ ಹೆಚ್ಚು ಕಾಲ ಭಾಷಣ ಮಾಡಿದರೂ, ಭಾಷಣದ  ವೇಳೆ ರಾಜ್ಯಕ್ಕೆ ಅನುದಾನ ನೀಡುವ ವಿಚಾರವನ್ನ ಮಾತ್ರ ಪ್ರಸ್ತಾಪಿಸಲಿಲ್ಲ. ಕೇಂದ್ರ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರ ಹೊರತಾಗಿ ರಾಜ್ಯಕ್ಕೆ ಅನುದಾನದ ವಿಚಾರದಲ್ಲಿ ಮೌನಕ್ಕೆ ಶರಣಾದರು. ಇದರಿಂದಾಗಿ ಅನುದಾನದ ನಿರೀಕ್ಷೆಯಲ್ಲಿದ್ದ ರಾಜ್ಯಕ್ಕೆ ಮತ್ತೆ ಹುಸಿಯಾಯಿತು.

ಇನ್ನು ಇದಕ್ಕೆ ಪೂರಕವಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ಟ್ವಿಟ್ಟರ್ ನಲ್ಲಿ ಪ್ರಧಾನಿ ಮೋದಿ ಅವರನ್ನ ತರಾಟೆ ತೆಗೆದುಕೊಂಡಿದ್ದಾರೆ.

Key words: CM BS yeddyurappa-appealed – compensation-pm-  Narendra Modi -silence