ಶಾಂತಿ ಕಾಪಾಡುವಂತೆ ರಾಜ್ಯದ ಜನರಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಮನವಿ

ನವದೆಹಲಿ, ನವೆಂಬರ್ 09, 2019 (www.justkannada.in): ರಾಜ್ಯಾಧ್ಯಂತ ಕಟ್ಟೆಚ್ಚರಕ್ಕೆ ಸೂಚಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಶಾಂತಿ ಕಾಪಾಡುವಂತೆ ರಾಜ್ಯದ ಜನರಲ್ಲಿ ಮನವಿ ಮಾಡಿದ್ದಾರೆ.

ಅಯೋಧ್ಯೆ ರಾಮಜನ್ಮ ಭೂಮಿಯ ಕುರಿತಂತೆ ಐತಿಹಾಸಿಕ ಮಹಾ ತೀರ್ಪು ಪ್ರಕಟಗೊಳ್ಳುವ ಹಿನ್ನೆಲೆಯಲ್ಲಿ ಸಿಎಂ ಈ ಮನವಿ ಮಾಡಿದ್ದಾರೆ. ಎಲ್ಲೆಲ್ಲೂ ಪೊಲೀಸರು ಹದ್ದಿನ ಕಣ್ಣು ನೆಟ್ಟಿದ್ದಾರೆ.

ಇಂತಹ ಸಂದರ್ಭದಲ್ಲಿಯೇ ಬಿಗಿ ಪೊಲೀಸ್ ಬಂದೋಬಸ್ತ್ ಕೂಡ ಕೈಗೊಳ್ಳಲಾಗಿದೆ. ಜೊತೆಗೆ ರಾಜ್ಯಾಧ್ಯಂತ 144 ಸೆಕ್ಷನ್ ಜಾರಿಮಾಡಲಾಗಿದೆ. “ತೀರ್ಪು ಏನೇ ಆಗಿರಲಿ, ಶಾಂತಿ- ಸೌಹಾರ್ದತೆಯ ಅಂತಃಶಕ್ತಿ ಜಗದ ಬೆಳಕಾಗಲಿ” ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.