ಮುಷ್ಕರ ಹಿಂಪಡೆಯುವಂತೆ ಸಾರಿಗೆ ನೌಕರರಿಗೆ ಸಿಎಂ ಬಿಎಸ್ ಯಡಿಯೂರಪ್ಪ ಮನವಿ…

ಬೆಂಗಳೂರು,ಡಿಸೆಂಬರ್,11,2020(www.justkannada.in):  ಸಾರಿಗೆ ನೌಕರರನ್ನು ಸರ್ಕಾರಿ ನೌಕರರು ಎಂದು ಪರಿಗಣಿಸುವುದರ ಸಹಿತ ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ ನಿನ್ನೆ ಪ್ರತಿಭಟನೆ ನಡೆಸಿದ್ದ ಸಾರಿಗೆ ನೌಕರರು ಇಂದು ಮುಷ್ಕರ ಹೂಡಿದ್ದಾರೆ.logo-justkannada-mysore

ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ ರಾಜ್ಯದ ಹಲವು ಕಡೆಗಳಲ್ಲಿ ಬಸ್ ಸಂಚಾರ ವ್ಯತ್ಯಯ ಉಂಟಾಗಿ ಜನರು ಪರದಾಟ ನಡಸುತ್ತಿದ್ದಾರೆ. ಹೀಗಾಗಿ ಸಾರಿಗೆ ನೌಕರರು ಮುಷ್ಕರ ಕೈಬಿಡುವಂತೆ ಸಿಎಂ ಬಿಎಸ್ ಯಡಿಯೂರಪ್ಪ ಮನವಿ ಮಾಡಿದ್ದಾರೆ.cm-bs-yeddyurappa-appeals-transport-workers-withdraw-strike

ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಕೋವಿಡ್ ಹಿನ್ನೆಲೆಯ ಸದ್ಯ ಆರ್ಥಿಕ ಸಂಕಷ್ಟ ಎದುರಾಗಿದೆ. ಇಂತಹ ಸಂಕಷ್ಟದ ಸಮಯದಲ್ಲಿ ನಿಮ್ಮ ಬೇಡಿಕೆ ಈಡೇರಿಸುವುದು ಕಷ್ಟ. ಹೀಗಾಗಿ ಪ್ರತಿಭಟನೆ ವಾಪಸ್ ಪಡೆಯಿರಿ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಪ್ರತಿಭಟನಾ ನಿರತ ಸಾರಿಗೆ ನೌಕರರಲ್ಲಿ ಮನವಿ ಮಾಡಿದ್ದಾರೆ.

Key words: CM BS Yeddyurappa -appeals – transport workers – withdraw -strike.