ಸಿಎಂ ಬಿಎಸ್ ವೈ ಆಡಿಯೋ ವೈರಲ್ ವಿಚಾರ: ರಾಜ್ಯ ಸರ್ಕಾರ ವಜಾ ಮಾಡಲು ಆಗ್ರಹಿಸಿ ರಾಜ್ಯಪಾಲರಿಗೆ ‘ಕೈ’ ನಿಯೋಗ ದೂರು…

ಬೆಂಗಳೂರು,ನ,2,2019(www.justkannada.in):  ಅನರ್ಹ ಶಾಸಕರ ಕುರಿತು  ಸಿಎಂ ಯಡಿಯೂರಪ್ಪ ಅವರ ಅಡಿಯೋ ಲೀಕ್ ಆದ ವಿಚಾರಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆಗೆ ಆಗ್ರಹಿಸಿ  ಕಾಂಗ್ರೆಸ್ ನಾಯಕರ ನಿಯೋಗ ಇಂದು ರಾಜ್ಯಪಾಲರನ್ನು ಭೇಟಿ ಮಾಡಿ ದೂರು  ನೀಡಿದೆ.

ಅಕ್ಟೋಬರ್ 26 ರಂದು ಸಿಎಂ ಬಿಎಸ್ ಯಡಿಯೂರಪ್ಪ ಹುಬ್ಬಳ್ಳಿಯಲ್ಲಿ ಮಾತನಾಡಿದ್ದ ಆಡಿಯೋ ಲೀಕ್ ಆಗಿತ್ತು. ಆಡಿಯೋದಲ್ಲಿ ಅಪರೇಷನ್ ಕಮಲದ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಬಾಯ್ಬಿಟ್ಟಿದ್ದರು ಎನ್ನಲಾಗಿದೆ.

 ಈ ಸಂಬಂಧ ಇಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ನಿಯೋಗ ರಾಜ್ಯಪಾಲರನ್ನ ಭೇಟಿಯಾಗಿ ದೂರು ನೀಡಿದೆ. ಸಿಎಂ ಯಡಿಯೂರಪ್ಪ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂವಿಧಾನಕ್ಕೆ ವಿರೋಧಿಯಾಗಿ ನಡೆದುಕೊಂಡಿದ್ದಾರೆ. ಅಪರೇಷನ್ ಕಮಲದ ಬಗ್ಗೆ ಬಾಯ್ಬಿಟ್ಟಿದ್ದಾರೆ. ಈ ಬಗ್ಗೆ ಬಿಎಸ್ ವೈ ಅವರೇ ಒಪ್ಪಿಕೊಂಡಿದ್ದಾರೆ. ಇದು ಸಂವಿಧಾನಾತ್ಮಕ ಉಲ್ಲಂಘನೆಯಾಗಿದ್ದು ಹೀಗಾಗಿ ರಾಜ್ಯ ಸರ್ಕಾರವನ್ನ ವಜಾಗೊಳಿಸಬೇಕು ಮತ್ತು ಕೇಂದ್ರ ಗೃಹ ಸಚಿವ ಸ್ಥಾನಕ್ಕೆ ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ದೂರಿನಲ್ಲಿ ಆಗ್ರಹಿಸಿದ್ದಾರೆ

ದೂರು ನೀಡಿ ಹೊರ ಬಂದ ಬಳಿಕ ಮಾಧ್ಯಮದ ಜತೆ ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ,  ನಾನೋಬ್ಬನೇ ಸರ್ಕಾರವನ್ನ ಬೀಳಿಸಿಲ್ಲ. ಅಮಿತ್ ಶಾ ಅಣತಿಯಂತೆ ಅಪರೇಷನ್ ಕಮಲ ನಡೆದಿದೆ ಎಂದು ಆಡಿಯೋದಲ್ಲಿ ಹೇಳಿದ್ದಾರೆ. ಈ ಮೂಲಕ ಸಂವಿಧಾನ ಬುಡಮೇಲು ಮಾಡಲು ಬಿಜೆಪಿ ಯತ್ನಿಸುತ್ತಿದೆ. ಹೀಗಾಗಿ ರಾಜ್ಯ ಸರ್ಕಾರವನ್ನ ವಜಾಗೊಳಿಸಬೇಕು. ಈ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ದೂರು ನೀಡಿದ್ದೇವೆ ಎಂದು ತಿಳಿಸಿದರು.

Key words: CM BS Yeddyurappa- Audio- Viral -complaint – governor – dismissal – state government-congress