Thursday, August 13, 2026

BDA Apartments

Home Front Page ಖಾತೆ ಹಂಚಿಕೆ ಮತ್ತು ಬದಲಾವಣೆ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದು ಹೀಗೆ…

ಖಾತೆ ಹಂಚಿಕೆ ಮತ್ತು ಬದಲಾವಣೆ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದು ಹೀಗೆ…

ಬೆಂಗಳೂರು,ಜನವರಿ,15,2021(www.justkannada.in):  ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆ ರಾಜ್ಯಕ್ಕೆ ಬರ್ತಾರೆ.  ಅಮಿತ್ ಶಾ ಬಂದು ಹೋದ ಬಳಿಕ ಖಾತೆ ಹಂಚಿಕೆ ಮಾಡಲಾಗುತ್ತದೆ ಎಂದು  ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದರು.jk-logo-justkannada-mysore

ಇಂದು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿಎಂ ಬಿಎಸ್ ಯಡಿಯೂರಪ್ಪ,  ನಾಳೆ ಅಮಿತ್ ಶಾ ರಾಜ್ಯಕ್ಕೆ ಬರುತ್ತಿದ್ದಾರೆ. ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.  ಅವರು ಬಂದು ಹೋದ ಬಳಿಕ ಖಾತೆ ಹಂಚಿಕೆ ಮಾಡುತ್ತೇವೆ. ಅಥವಾ ಅದಕ್ಕೂ ಮುನ್ನ ಖಾತೆ ಹಂಚಿಕೆ ಮಾಡಬಹುದು ಎಂದರು.CM BS Yeddyurappa- clarified –department-allocation - change –new minister

ಇನ್ನು ನೂತನ ಸಚಿವರಿಗೆ ಖಾತೆ ಹಂಚಿಕೆ,  ಖಾತೆ ಬದಲಾವಣೆ,  ಖಾತೆ ಅದಲು ಬದಲು ಮಾಡುವುದು. ಸೇರಿ ಹಲವು ವಿಚಾರಗಳ ಬಗ್ಗೆ ಪಕ್ಷದ ಹಿರಿಯರ ಜತೆ ಚರ್ಚೆ ನಡೆಸಲಾಗುತ್ತದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.

Key words: CM BS Yeddyurappa- clarified –department-allocation – change –new minister