ಸುಧರ್ಮ ಪತ್ರಿಕೆ ಸಂಪಾದಕ ಸಂಪತ್ ಕುಮಾರ್ ನಿಧನಕ್ಕೆ ಸಿಎಂ ಬಿಎಸ್ ವೈ ಸಂತಾಪ.

ಬೆಂಗಳೂರು,ಜೂನ್,30,2021(www.justkannada.in):  ಸುಧರ್ಮ ಪತ್ರಿಕೆ ಸಂಪಾದಕ ಸಂಪತ್ ಕುಮಾರ್ ಅವರ ನಿಧನಕ್ಕೆ ಸಿಎಂ ಬಿ.ಎಸ್.ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಟ್ವಿಟ್ ಮಾಡಿ ಸಂತಾಪ ಸೂಚಿಸಿರುವ ಸಿಎಂ ಬಿಎಸ್ ವೈ, ವಿಶ್ವದ ಏಕೈಕ ಸಂಸ್ಕೃತ ದೈನಿಕ ಸುಧರ್ಮ ಪತ್ರಿಕೆ ಮೂಲಕ ಸಂಸ್ಕೃತ ಭಾಷೆಯ ಉಳಿವಿಗೆ ಶ್ರಮಿಸಿದ್ದರು. ಅವರ ನಿಧನದಿಂದ ಪತ್ರಿಕೋದ್ಯಮ ವಿಶಿಷ್ಟ ಸಾಧಕರನ್ನು ಕಳೆದುಕೊಂಡಿದೆ.  ಅವರ ಆತ್ಮಕ್ಕೆ ಸದ್ಗತಿ ಪ್ರಾರ್ಥಿಸುತ್ತೇನೆ. ಅವರ ಕುಟುಂಬದವರಿಗೆ, ಅಭಿಮಾನಿಗಳಿಗೆ ಮತ್ತು ಸಂಸ್ಕೃತ ಭಾಷಾಸಕ್ತರಿಗೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ದೇವರು ದಯಪಾಲಿಸಲಿ ಎಂದು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Key words: CM BS yeddyurappa- condolences- death – Sudharma newspaper –editor- Sampath Kumar