ಮಾಜಿ ಸಿಎಂ ಹೆಚ್.ಡಿ ಕೆ ಮತ್ತು ಸಿದ್ದರಾಮಯ್ಯಗೆ ಕೃತಜ್ಞತೆ ಸಲ್ಲಿಸಿದ ಸಿಎಂ ಬಿಎಸ್ ಯಡಿಯೂರಪ್ಪ…

ಬೆಂಗಳೂರು,ಆ,12,2019(www.justkannada.in):  ನೆರೆ ಪರಿಹಾರ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರಕ್ಕೆ ಸಂಪೂರ್ಣ ಸಹಕಾರ ನೀಡಿದ್ದಾರೆ. ಅವರಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಕೃತಜ್ಞತೆ ಸಲ್ಲಿಸಿದರು.

ಇಂದು ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ,  ರಾಜ್ಯದಲ್ಲಿ ಪ್ರವಾಹದಿಂದ 40ರಿಂದ 50 ಕೋಟಿ ನಷ್ಟ ಉಂಟಾಗಿದೆ. 3 ಸಾವಿರ ಕೋಟಿ ರೂ ಪರಿಹಾರಕ್ಕೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇನೆ.  ಪರಿಹಾರ ಬಿಡುಗಡೆ ಕುರಿತು ಕೇಂದ್ರ ಸಚಿವರ ಜತೆ ಚರ್ಚಿಸಲು ಆಗಸ್ಟ್ 16ಕ್ಕೆ ದೆಹಲಿಗೆ ತೆರಳುತ್ತೇನೆ ಎಂದು ತಿಳಿಸಿದರು.

ಹಾಗೆಯೇ  ನೆರೆ ಪರಿಹಾರಕ್ಕೆ ಸಹಕಾರ ನೀಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಹೆಚ್.ಡಿ ದೇವೇಗೌಡರಿಗೆ ವಿಶೇಷವಾಗಿ ಧನ್ಯವಾದ ಅರ್ಪಿಸುತ್ತೇನೆ ಎಂದು ಸಿಎಂ ಹೇಳಿದರು. ಇಂದು ಮಂಗಳೂರು ಭಾಗದಲ್ಲಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಭೇಟಿ ನೀಡುತ್ತೇನೆ. ನಾಳೆ ಶಿವಮೊಗ್ಗ ಮತ್ತು ಸಾಗರಕ್ಕೆ ಹೋಗುತ್ತೇನೆ ಎಂದು ಬಿಎಸ್ ವೈ ತಿಳಿಸಿದರು.

Key words: cm bs yeddyurappa-thanked-former cm- hd kumaraswamy-siddaramaiah