ಸಿದ್ಧರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿ ಹೆಚ್.ಡಿ ಕುಮಾರಸ್ವಾಮಿಗೆ ಅಭಿನಂದನೆ ತಿಳಿಸಿದ ಸಿಎಂ ಬಿ.ಎಸ್ ಯಡಿಯೂರಪ್ಪ…..

ಬೆಂಗಳೂರು,ಅ,28,2019(www.justkannada.in):  ಸಿದ್ಧರಾಮಯ್ಯ ಇತ್ತೀಚೆಗೆ ಮನಬಂದಂತೆ  ಮಾತಾಡ್ತಿದ್ದಾರೆ. ಅವರೇನು‌ ಮಾತಾಡ್ತಿದಾರೆ ಅಂತ ಅವರಿಗೇ ಗೊತ್ತಾಗಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಕಿಡಿಕಾರಿದರು.

ಬೆಂಗಳೂರಿನಲ್ಲಿ ಇಂದು ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಇಂದು ಸಂಜೆ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಬಿಡುಗಡೆ ಆಗುತ್ತೆ. ರಾಜ್ಯೋತ್ಸವ ಪ್ರಶಸ್ತಿ ಸಂಬಂಧ ಸಮಿತಿ ಜೊತೆ ಚರ್ಚಿಸಲಾಗಿದೆ. ಎಲ್ಲ ಜಿಲ್ಲೆಗಳು, ಎಲ್ಲ ವರ್ಗದವರಿಗೂ ಆದ್ಯತೆ ಕೊಟ್ಟಿದ್ದೇವೆ. ಪ್ರಶಸ್ತಿ ಆಯ್ಕೆಯಲ್ಲಿ ಯಾವುದೇ ವ್ಯಕ್ತಿಗಳ ವೈಯಕ್ತಿಕ ಬೇಡಿಕೆಗಳಿಗೆ ಮನ್ನಣೆ ಕೊಟ್ಟಿಲ್ಲ. 64 ಗಣ್ಯರಿಗೆ ಈ ಸಲ ರಾಜ್ಯೋತ್ಸವ ಪ್ರಶಸ್ತಿ ಕೊಡುತ್ತೇವೆ ಎಂದು ತಿಳಿಸಿದರು.

ಇದೇ ವೇಳೆ ಸಿದ್ಧರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದ ಸಿಎಂ ಬಿಎಸ್ ಯಡಿಯೂರಪ್ಪ, ಇತ್ತೀಚೆಗೆ ಮನಬಂದಂತೆ ಸಿದ್ದರಾಮಯ್ಯ ಮಾತಾಡ್ತಿದ್ದಾರೆ. ಅವರೇನು‌ ಮಾತಾಡ್ತಿದಾರೆ ಅಂತ ಅವರಿಗೆ ಗೊತ್ತಾಗಲ್ಲ. ಅವರು ಅವರ ಪಕ್ಷದಲ್ಲೇ ಗೊಂದಲ ಹುಟ್ಟಿಸುತ್ತಿದ್ದಾರೆ. ತಾವೇ ಎಲ್ಲಾ ಜವಾಬ್ದಾರಿ ಹೊತ್ತಿದ್ದೇನೆ ಅಂತ ಸಿದ್ದರಾಮಯ್ಯ ಮಾತಾಡ್ತಿದ್ದಾರೆ. ಸಿದ್ದರಾಮಯ್ಯ ಬಗ್ಗೆ ಕಾಂಗ್ರೆಸ್ ನವರಿಗೇ ಸಮಾಧಾನ ಇಲ್ಲ. ಜನ‌ ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸ್ತಿದ್ದಾರೆ. ಡಿಕ್ಟೇಟರ್ ಥರ ಸಿದ್ದರಾಮಯ್ಯ ಮಾತಾಡ್ತಿದ್ದಾರೆ. ಸಿದ್ದರಾಮಯ್ಯ ಅವರ ಇಂಥ ಹೇಳಿಕೆಗಳಿಗೆ ನಾನು ಪ್ರತಿಕ್ರಿಯೆ ಕೊಡಲ್ಲ ಎಂದರು.

ಬಿಜೆಪಿ ಸರ್ಕಾರ ಉರುಳಲು ಬಿಡಲ್ಲ ಎಂದ ಹೆಚ್,ಡಿ ಕುಮಾರಸ್ವಾಮಿಗೆ ಸಿಎಂ ಬಿಎಸ್ ವೈ ಅಭಿನಂದನೆ..

ಬಿಜೆಪಿ ಸರ್ಕಾರ ಉರುಳಲು ಬಿಡಲ್ಲ ಎಂದು ಹೇಳಿಕೆ ನೀಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ  ಅಭಿನಂದನೆ ತಿಳಿಸಿದ ಸಿಎಂ ಯಡಿಯೂರಪ್ಪ, ಸರ್ಕಾರ ಉತ್ತಮ ಕೆಲಸ ಮಾಡ್ತಿದೆ ಅನ್ನೋದು ಕುಮಾರಸ್ವಾಮಿ ನಂಬಿಕೆ. ಅತಿವೃಷ್ಟಿ, ಬೇರೆ ಬೇರೆ ಜನರ ಸಮಸ್ಯೆಗಳನ್ನು ಸರ್ಕಾರ ಉತ್ತಮವಾಗಿ ನಿಭಾಯಿಸುತ್ತಿದೆ. ಹಾಗಾಗಿ ಈ ಸರ್ಕಾರವನ್ನು ಡಿಸ್ಟರ್ಬ್ ಮಾಡೋದು ಬೇಡ ಅಂತ ಕುಮಾರಸ್ವಾಮಿ ನಮ್ ಸರ್ಕಾರಕ್ಕೆ ಬೆಂಬಲಿಸಿ ಹೇಳಿಕೆ ಕೊಟ್ಟಿದ್ದಾರೆ. ಇದಕ್ಕಾಗಿ ಕುಮಾರಸ್ವಾಮಿಯವರಿಗೆ ಅಭಿನಂದನೆ ತಿಳಿಸುತ್ತೇನೆ ಎಂದು ಹೇಳಿದರು.

Key words: CM BS Yeddyurappa –congratulates- HD Kumaraswamy – argument –against- Siddaramaiah.