ಸಿಎಂ ಬಿಎಸ್ ವೈ ಕೊರೋನಾ ಹಿನ್ನೆಲೆ: ಕಾವೇರಿ ನಿವಾಸ ಸೀಲ್ ಡೌನ್…..

ಬೆಂಗಳೂರು,ಆ,4,2020(www.justkannada.in):  ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪಗೆ ಕೊರೋನಾ ಸೋಂಕು ತಗುಲಿದ್ದು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆ ಸಿಎಂ ಕಾವೇರಿ ನಿವಾಸವನ್ನ ಸೀಲ್ ಡೌನ್ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.jk-logo-justkannada-logo

ಸಿಂ ಬಿಎಸ್ ಯಡಿಯೂರಪ್ಪಗೆ ಮೊನ್ನೆ ರಾತ್ರಿ ಕೋವಿಡ್ -19 ಇರುವುದು ದೃಢಪಟ್ಟಿತ್ತು. ಈ ಹಿನ್ನೆಲೆ ತಕ್ಷಣವೇ ಸಿಎಂ ಬಿಎಸ್ ಯಡಿಯೂರಪ್ಪ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಸಿಎಂ ಬಿಎಸ್ ವೈಗೆ ಚಿಕಿತ್ಸೆ ಮುಂದುವರೆದಿದ್ದು ಅಗಸ್ಟ್ 16ರವರೆಗೆ  ಸಿಎಂ ನಿವಾಸ ಸೀಲ್ ಡೌನ್ ಮಾಡಲಾಗಿದೆ. ಅಲ್ಲದೆ ಸಿಎಂ ನಿವಾಸಕ್ಕೆ ಕ್ವಾರಂಟೈನ್ ಸ್ಟಿಕ್ಕರ್ ಅಂಟಿಸಲಾಗಿದೆ ಎಂದು ಹೇಳಲಾಗುತ್ತಿದೆ.cm-bs-yeddyurappa-corona-cauvery-residence-seal-down

ಸಿಎಂ ಬಿಎಸ್ ಯಡಿಯೂರಪ್ಪಗೆ ಕೊರೋನಾ ಹಿನ್ನೆಲೆ ನಿನ್ನೆ ರಾಜ್ಯಪಾಲರಾದ ವಜುಭಾಯಿ ವಾಲಾ ಸಚಿವ ಬಸವರಾಜ ಬೊಮ್ಮಾಯಿ, ಡಿಸಿಎಂ ಅಶ್ವಥ್ ನಾರಾಯಣ್, ಕೇಂದ್ರ ಸಚಿವ ಡಿವಿ ಸದಾನಂದಗೌಡರಿಗೆ ಕೋವಿಡ್ ಟೆಸ್ಟ್ ಮಾಡಲಾಗಿತ್ತು. ಎಲ್ಲರಿಗೂ ಕೋವಿಡ್ ಟೆಸ್ಟ್ ವರದಿ ನೆಗೆಟಿವ್ ಬಂದಿದೆ.

Key words: CM BS Yeddyurappa- Corona -Cauvery Residence- Seal Down.