ಸಿಎಂ ಬಿಎಸ್ ವೈ ಆರೋಗ್ಯವಾಗಿದ್ದಾರೆ: ಆತಂಕ ಬೇಡ: ಪುತ್ರ ಬಿವೈ ವಿಜಯೇಂದ್ರ ಸ್ಪಷ್ಟನೆ…

ಬೆಂಗಳೂರು,ಆ,3,2020(www.justkannada.in): ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಿಎಂ ಬಿಎಸ್ ವೈ ಆರೋಗ್ಯದ ಬಗ್ಗೆ ಅವರ ಪುತ್ರ ವಿಜಯೇಂದ್ರ ಮಾಹಿತಿ ನೀಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಬಿವೈ ವಿಜಯೇಂದ್ರ, ಸಿಎಂ ಬಿಎಸ್ ಯಡಿಯೂರಪ್ಪ ಆರೋಗ್ಯವಾಗಿದ್ದಾರೆ. ಯಾವುದೇ ಸಮಸ್ಯೆ ಇಲ್ಲ. ಬೆಳಿಗ್ಗೆ ನಿಯಮಿತ ಆರೋಗ್ಯ ಪರೀಕ್ಷೆ ನಡೆಸಲಾಗುತ್ತಿದೆ. ರಕ್ತ ಪರೀಕ್ಷೆ ಬಿಪಿ, ಶುಗರ್ ಟೆಸ್ಟ್ ಮಾಡಲಾಗುತ್ತಿದೆ.  ಸಿಎಂ ಬಿಎಸ್ ವೈ ಅವರಿಗೆ ಯಾವುದೇ ಸಮಸ್ಯೆ ಇಲ್ಲ ಚೆನ್ನಾಗಿದ್ದಾರೆ ಎಂದು ತಿಳಿಸಿದರು.cm-bs-yeddyurappa-corona-health-cms-son-by-vijayendra

ಇನ್ನು ತಮ್ಮ ತಂದೆ ಆರೋಗ್ಯದ ಬಗ್ಗೆ ಪ್ರತಿಕ್ರಿಯಿಸಿರುವ ಬಿವೈ ರಾಘವೇಂದ್ರ, ಸಿಎಂ ಬಿಎಸ್ ವೈ ಆರೋಗ್ಯವಾಗಿದ್ದಾರೆ. ಯಾವುದೇ ಆತಂಕ ಬೇಡ. ನನ್ನ ಸಹೋದರಿ ಕೂಡ ಆರೋಗ್ಯವಾಗಿದ್ದಾರೆ. ಇಬ್ಬರು ಆರೋಗ್ಯವಾಗಿದ್ದು ಯಾವುದೇ ಆತಂಕ ಬೇಡ ಎಂದಿದ್ದಾರೆ.

Key words:  CM BS Yeddyurappa- corona-Health-CM’s- son -BY Vijayendra