ಸಿಎಂ ಬಿಎಸ್ವೈ ತುರ್ತು ಸುದ್ದಿಗೋಷ್ಠಿ: ನೆರೆ ಸಂತ್ರಸ್ಥರ ನೆರವಿಗೆ ಕೈಗೊಂಡಿರುವ ಕ್ರಮಗಳ ಮಾಹಿತಿ

ಬೆಂಗಳೂರು, ಆಗಸ್ಟ್ 08, 2019 (www.justkannada.in): ಸಿಎಂ ಬಿ.ಎಸ್.ಯಡಿಯೂರಪ್ಪ ಇಂದು ತುರ್ತು ಸುದ್ದಿಗೋಷ್ಠಿ ನಡೆಸಿ ನೆರೆ ಸಂತ್ರಸ್ಥರ ನೆರವಿಗೆ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡಿದರು.

ಉತ್ತರ ಕರ್ನಾಟಕ ಜಿಲ್ಲೆಗಳು ಸೇರಿದಂತೆ ಕೊಡಗು, ಉತ್ತರ ಕನ್ನಡ, ಹಾಸನ ಜಿಲ್ಲೆಗಳಲ್ಲಿ ನೆರವಿಗೆ ಭರದ ಕಾರ್ಯಾಚರಣೆ ನಡೆಯುತ್ತಿದೆ. ಹಲವು ಸಂಘ, ಸಂಸ್ಥೆಗಳು ಕೂಡ ನೆರೆ ಸಂತ್ರಸ್ಥರಿಗೆ ನೆರವು ನೀಡುತ್ತಿದ್ದಾರೆ.

ರಾಜ್ಯ ಸರಕಾರಿ ನೌಕರರ ಸಂಘದಿಂದ ಎಲ್ಲ ನೌಕರರ ಒಂದು ದಿನದ ವೇತನ ನೀಡುವುದಾಗಿ ಭರವಸೆ ನೀಡಿದ್ದಾರೆ. ರಾಜ್ಯ ಸರಕಾರದಿಂದ 100 ಕೋಟಿ ರೂ. ತುರ್ತು ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.