ನಾಲ್ಕು ದಿನಗಳ ಕಾಲ ಸಿಎಂ ಬಿ.ಎಸ್ ಯಡಿಯೂರಪ್ಪರಿಂದ ನೆರೆ ಪೀಡಿತ ಪ್ರದೇಶಗಳಲ್ಲಿ ಪ್ರವಾಸ..

ಬೆಂಗಳೂರು,ಅ,3,2019(www.justkannada.in): ಭಾರಿ ಮಳೆಯಿಂದಾಗಿ ಹಾನಿಗೊಳಗಾಗಿರುವ ನೆರೆ ಪೀಡಿತ ಪ್ರದೇಶಗಳಿಗೆ ಸಿಎಂ ಬಿ.ಎಸ್ ಯಡಿಯೂರಪ್ಪ ಇಂದಿನಿಂದ ನಾಲ್ಕು ದಿನಗಳ ಕಾಲ ಪ್ರವಾಸ ಕೈಗೊಂಡಿದ್ದಾರೆ.

ನೆರೆ ಪೀಡಿತ ಜಿಲ್ಲೆಗಳಾದ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಯಾದಗಿರಿಯ ಹಲವು ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿರುವ ಸಿಎಂ ಬಿಎಸ್ ಯಡಿಯೂರಪ್ಪ ಅಲ್ಲಿನ ಪರಿಸ್ಥಿತಿ ಬಗ್ಗೆ ಅವಲೋಕನ ಮಾಡಲಿದ್ದಾರೆ. ಇಂದು ಸಂಜೆ ಸಿಎಂ ಬಿಎಸ್ ವೈ ಬೆಳಗಾವಿಗೆ ತೆರಳಲಿದ್ದಾರೆ.

ಬೆಳಗಾವಿಯಲ್ಲಿ ಅಧಿಕಾರಿಗಳ ಜತೆ ಪ್ರಗತಿ ಪರಿಶೀಲನಾ ಸಭೆ ನಡೆಸಲಿರುವ ಸಿಎಂ ಬಿಎಸ್ ವೈ ನೆರೆ ಪರಿಹಾರ ಹಂಚಿಕೆ ಕುರಿತು ಚರ್ಚೆ ನಡೆಸಲಿದ್ದಾರೆ.  ಇಂದಿನಿಂದ ಭಾನುವಾರದವರೆಗೆ ಸಿಎಂ ಬಿಎಸ್ ಯಡಿಯೂರಪ್ಪ ಪ್ರವಾಸ ಕೈಗೊಂಡಿದ್ದಾರೆ. ಇನ್ನೊಂದೆಡೆ ಕೇಂದ್ರ ಸರ್ಕಾರ ನೆರೆ ಪರಿಹಾರ ಬಿಡುಗಡೆ ಮಾಡದಿದ್ದಕ್ಕೆ ನೆರೆ ಸಂತ್ರಸ್ತರು ಆಕ್ರೋಶ ವ್ಯಕ್ತಪಡಿಸಿದ್ದು ಇದರಿಂದ ಆಗುವ ಮುಜುಗರ ತಪ್ಪಿಸಿಕೊಳ್ಳಲು ಸಿಎಂ ಬಿಎಸ್ ವೈ ಮುಂದಾಗಿದ್ದಾರೆ.

Key words: cm bs yeddyurappa-flood-area-tour-four days