Saturday, August 8, 2026

BDA Apartments

Home Front Page ಕೋವಿಡ್ ನಿಂದ ಮೃತಪಟ್ಟ ಪತ್ರಕರ್ತರಿಬ್ಬರ ಕುಟುಂಬಕ್ಕೆ ಪರಿಹಾರ ಮಂಜೂರು ಮಾಡಿದ ಸಿಎಂ ಬಿಎಸ್ ವೈ.

ಕೋವಿಡ್ ನಿಂದ ಮೃತಪಟ್ಟ ಪತ್ರಕರ್ತರಿಬ್ಬರ ಕುಟುಂಬಕ್ಕೆ ಪರಿಹಾರ ಮಂಜೂರು ಮಾಡಿದ ಸಿಎಂ ಬಿಎಸ್ ವೈ.

ಬೆಂಗಳೂರು,ಜುಲೈ,8,2021(www.justkannada.in): ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ, ಇತ್ತೀಚೆಗೆ ಕೋವಿಡ್ ಗೆ ಬಲಿಯಾಗಿದ್ದ ಕಲಬುರ್ಗಿ ಜಿಲ್ಲೆಯ ಸಂಯುಕ್ತ ಕರ್ನಾಟಕ ಪತ್ರಿಕೆಯ ಹಿರಿಯ ಪತ್ರಕರ್ತ ಜಯತೀರ್ಥ ಕಾಗಲಕರ ಮತ್ತು ಕೊಡಗು ಜಿಲ್ಲೆಯ ವಿರಾಜಪೇಟೆಯ ಮೈಸೂರು ಮಿತ್ರ ಪತ್ರಿಕೆಯ ವರದಿಗಾರ ಎಸ್.ಎಂ.ಚೆಂಗಪ್ಪ ಅವರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಜೂರು ಮಾಡಿದ್ದಾರೆ.jk

ಪತ್ರಕರ್ತರುಗಳಾದ ಜಯತೀರ್ಥ ಕಾಗಲಕರ ಅವರಿಗೆ ಪರಿಹಾರ ನೀಡುವಂತೆ ಕಲಬುರಗಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ, ಎಸ್.ಎಂ.ಚೆಂಗಪ್ಪ ಅವರಿಗೆ ಪರಿಹಾರ ಮಂಜೂರು ಮಾಡುವಂತೆ ಕೊಡಗು ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘಗಳು, ರಾಜ್ಯ ಸಂಘಕ್ಕೆ ಮನವಿ ಮಾಡಿದ್ದವು.

ಕೆಯುಡಬ್ಲ್ಯೂಜೆ ಮನವಿ ಪರಿಗಣಿಸಿ ಪರಿಹಾರ ಮಂಜೂರು ಮಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Key words: CM BS yeddyurappa-granted -compensation -death- two journalists-family