ಜೆಎಸ್ಎಸ್ ಆಸ್ಪತ್ರೆಯಲ್ಲಿ ನಿರ್ಮಾಣವಾಗಿರುವ ನೂತನ ಕೋವಿಡ್ ಪರೀಕ್ಷಾ ಕೇಂದ್ರ ಉದ್ಘಾಟಿಸಿದ ಸಿಎಂ ಬಿಎಸ್ ಯಡಿಯೂರಪ್ಪ…

ಮೈಸೂರು,ಜೂ,29,2020(www.justkannada.in): ಜೆ ಎಸ್ ಎಸ್ ವೈದ್ಯಕೀಯ ಕಾಲೇಜಿನಿಂದ  ನೂತನವಾಗಿ ಸ್ಥಾಪಿಸಲಾಗಿರುವ ಕೋವಿಡ್ ಪರೀಕ್ಷಾ ಕೇಂದ್ರವನ್ನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಉದ್ಘಾಟಿಸಿದರು.

ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಯವರ ಸಾನ್ನಿಧ್ಯದಲ್ಲಿ ನೂತನ ಕೋವಿಡ್ ಪರೀಕ್ಷಾ ಕೇಂದ್ರ ಉದ್ಘಾಟನಾ ಕಾರ್ಯಕ್ರಮ ನಡೆಯಿತು.  ಆನ್‌ಲೈನ್ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ  ಕೋವಿಡ್ ಪರೀಕ್ಷಾ ಕೇಂದ್ರ ಉದ್ಘಾಟನೆ ಮಾಡಿದರು. ಆನ್ ಲೈನ್ ಕಾರ್ಯಕ್ರಮದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಸಂಸದ ಪ್ರತಾಪ್ ಸಿಂಹ, ಶಾಸಕ ಎಲ್.ನಾಗೇಂದ್ರ ಸೇರಿ ಮತ್ತಿತರರು ಭಾಗಿಯಾಗಿದ್ದರು.CM BS Yeddyurappa- inaugurated -new Kovid Testing Center.

ಜೆಎಸ್ಎಸ್ ಆಸ್ಪತ್ರೆಯಲ್ಲಿ ನಿರ್ಮಾಣಗೊಂಡಿರುವ ನೂತನ ಕೋವಿಡ್ ಪರೀಕ್ಷಾ ಕೇಂದ್ರ ಅತ್ಯಾಧುನಿಕ ಯಂತ್ರೋಪಕರಣಗಳನ್ನೊಳಗೊಂಡಿದೆ. ಎನ್.ಎ.ಬಿ.ಎಲ್ ಮತ್ತು ಐ.ಸಿ.ಎಆರ್‌ಗಳ ಅನುಮೋದನೆಯನ್ನ ಪಡೆದಿದೆ. ಜ್ವರ, ಕೆಮ್ಮು, ನೆಗಡಿ ಇತ್ಯಾದಿ ರೋಗದ ಲಕ್ಷಣಗಳು ಕಂಡುಬಂದರೆ ಪರೀಕ್ಷೆ ಮಾಡಿಸಿಕೊಳ್ಳಲು ಈ ಕೋವಿಡ್ ಕೇಂದ್ರ ಸಹಕಾರಿಯಾಗಲಿದೆ.

Key words: CM BS Yeddyurappa- inaugurated -new Kovid Testing Center.