ಪೇಜಾವರ ಶ್ರೀಗಳ ಆರೋಗ್ಯದ ಬಗ್ಗೆ ಮಾಹಿತಿ ಪಡೆದ ಸಿಎಂ ಬಿಎಸ್ ವೈ: ಗಣ್ಯರ ಭೇಟಿಗೆ ನಿರ್ಬಂಧ…

0
417

ಉಡುಪಿ,ಡಿ,28,2019(www.justkannada.in): ಅನಾರೋಗ್ಯದ ಸಮಸ್ಯೆಯಿಂದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿಗಳ ಆರೋಗ್ಯದ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ವೈದ್ಯರ ಬಳಿ ಮಾಹಿತಿ ಪಡೆದಿದ್ದಾರೆ.

ಸಿಎಂ ಬಿಎಸ್ ಯಡಿಯೂರಪ್ಪ ಉಡುಪಿಗೆ ತೆರಳುವ ಮುನ್ನ ಮಣಿಪಾಲ ಆಸ್ಪತ್ರೆಯ ವೈದ್ಯರ ಬಳಿಯಿಂದ ಪೇಜಾವರಶ್ರೀಗಳ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಇನ್ನು ಪೇಜಾವರ ಶ್ರೀಗಳು ಆಸ್ಪತ್ರೆಗೆ ದಾಖಲಾದ ದಿನದಿಂದ ಪ್ರತಿನಿತ್ಯ ಗಣ್ಯರು ಭೇಟಿ ನೀಡುತ್ತಿರುವುದರಿಂದ ಚಿಕಿತ್ಸೆಗೆ ಅಡ್ಡಿಯಾಗುತ್ತಿದೆ. ಪ್ರತೀ ಸಲ ಗಣ್ಯರು ಭೇಟಿಗೆ ಬಂದಾಗ ಐಸಿಯೂ ಬಾಗಿಲು ತೆರೆಯಬೇಕಾಗುತ್ತದೆ. ಹಾಗಾಗಿ ಗಣ್ಯರ ಭೇಟಿಗೆ ನಿರ್ಬಂಧ ವಿಧಿಸಲಾಗಿದೆ ಎನ್ನಲಾಗಿದೆ.

ಇಂದಿನಿಂದ ಯಾವುದೇ ಗಣ್ಯರಿಗೆ ಸ್ವಾಮೀಜಿಗಳ ಭೇಟಿಗೆ ಅವಕಾಶ ನೀಡಲಾಗುವುದಿಲ್ಲ  ಎಂದು ವೈದ್ಯರು ಸೂಚಿಸಿದ್ದಾರೆ ಎನ್ನಲಾಗಿದೆ.  ಇಂದು ಮುಂಜಾನೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮಣಿಪಾಲ ಆಸ್ಪತ್ರೆಗೆ ಭೇಟಿ ನೀಡಿ ಸ್ವಾಮೀಜಿಗಳ ಆರೋಗ್ಯ ವಿಚಾರಿಸಿದರು.

Key words: CM BS Yeddyurappa- – information – health –pejavar shri-udupi-manipal hospitel