ಕೊಡಗಿನ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದ ಸಿಎಂ ಬಿಎಸ್ ವೈ: ಯಾವುದೇ ಸಮಸ್ಯೆಯಾಗದಂತೆ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಸೂಚನೆ….

ಬೆಂಗಳೂರು,ಆ,8,2020(www.justkannada.in):  ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆಗೆ ಕೊಡಗಿನಲ್ಲಿ ಆವಾಂತರ ಸೃಷ್ಠಿಯಾಗಿದ್ದು ಮಳೆಯಿಂದಾಗಿ ಗುಡ್ಡಕುಸಿದು ಜನಜೀವನ ತತ್ತರಿಸಿದೆ. ಹೀಗಾಗಿ ಕೊಡಗಿನ ಪರಿಸ್ಥಿತಿ ಬಗ್ಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರ ಬಳಿ ಸಿಎಂ ಬಿಎಸ್ ಯಡಿಯೂರಪ್ಪ ಮಾಹಿತಿ ಪಡೆದರು.jk-logo-justkannada-logo

ಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರಿಗೆ ದೂರವಾಣಿ ಕರೆ ಮಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಕೊಡಗಿನ ಪರಿಸ್ಥಿತಿ ಬಗ್ಗೆ ಮಾಹಿತಿ ಕಲೆ ಹಾಕಿದರು. ಹಾಗೆಯೇ ಸರ್ಕಾರದಿಂದ ಎಲ್ಲಾ ನೆರವು ನೀಡಲು ಸಿದ್ಧ. ಯಾವುದೇ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಿ ಎಂದು ಸೂಚಿಸಿದರು.cm-bs-yeddyurappa-information-situation-kodagu-dc-annies-kanmani-joy

ಹಾಗೆಯೇ ಕೊಡಗಿನಲ್ಲಿ ಮಳೆಯಿಂದಾಗಿ ಉಂಟಾಗಿರುವ ಅವಾಂತರ ಬಗ್ಗೆ ಅಲ್ಲೇ ಇದ್ದುಕೊಂಡು ಸಚಿವ ವಿ.ಸೋಮಣ್ಣ ಪರಿಶೀಲಿಸುತ್ತಿದ್ದು ಸಚಿವರ ಜತೆ ಸಂಪರ್ಕದಲ್ಲಿದ್ದು ಕೆಲಸ ಮಾಡಿ ಎಂದು ಡಿಸಿ ಅನೀಸ್ ಕಣ್ಮಣಿ ಜಾಯ್ ಅವರಿಗೆ ಸೂಚನೆ ನೀಡಿದರು.

Key words: CM BS Yeddyurappa- information – situation-kodagu-DC- Annies kanmani joy