ಜಲಸಮಾಧಿ: ಮಂಡ್ಯದ ಏಳು ಜನರಿಗೆ ಪರಿಹಾರ ನೀಡಲು ಸಿಎಂ ಬಿಎಸ್ ವೈ ಸೂಚನೆ…

ಬೆಂಗಳೂರು, ಜೂ,15,2020(www.justkannada.in):  ಮಂಡ್ಯ ಜಿಲ್ಲೆಯಲ್ಲಿ ಮೂರು  ಪ್ರತ್ಯೇಕ ಪ್ರಕರಣಗಳಲ್ಲಿ ಜೂನ್ 14 ರಂದು  ಜಲಸಮಾಧಿಯಾದ ಏಳು ಮಂದಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಒಟ್ಟು 22 ಲಕ್ಷ ರೂ.ಗಳ ಪರಿಹಾರವನ್ನು ಒದಗಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದ್ದಾರೆ.cm-bs-yeddyurappa-instructs-relief-seven-water-death-mandya

ನಾಗಮಂಗಲ ತಾಲ್ಲೂಕಿನ ಬೀರನಹಳ್ಳಿಯ ಶ್ರೀಮತಿ ಗೀತಾ, ಕು.ಸವಿತಾ ಹಾಗೂ ಕು.ಸೌಮ್ಯ ಅವರಿಗೆ ತಲಾ 5 ಲಕ್ಷ ರೂ.ಗಳು ಹಾಗೂ ಇದೇ ತಾಲೂಕಿನ ಚೋಳಸಂದ್ರ ಗ್ರಾಮದ ಕು.ರಶ್ಮಿ ಮತ್ತು ಕು.ಇಂಚರಾ, ಕೆ.ಆರ್.ಪೇಟೆ ತಾಲ್ಲೂಕಿನ ಹುಳಿ ಗಂಗನಹಳ್ಳಿಯ ಮಾಸ್ಟರ್ ಅಭಿಷೇಕ್ ಮತ್ತು ಆದಿಹಳ್ಳಿಯ ಕುಮಾರ್ ಅವರುಗಳಿಗೆ ತಲಾ 2 ಲಕ್ಷ ರೂ.ಗಳನ್ನು ಪರಿಹಾರ ನಿಧಿಯಿಂದ ತುರ್ತಾಗಿ ನೀಡುವಂತೆ  ಸಿಎಂ ಬಿಎಸ್ ವೈ ಸೂಚಿಸಿದ್ದಾರೆ.

Key words: CM BS Yeddyurappa- instructs -relief -seven –water- death-Mandya