ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಭೇಟಿ ಮಾಡಿ ಬೆಳೆವಿಮೆ ನೋಂದಣಿ ಅವಧಿ ವಿಸ್ತರಿಸಲು ಮನವಿ ಮಾಡಿದ ಸಿಎಂ ಬಿಎಸ್ ವೈ

ನವದೆಹಲಿ, ಆ,6,2019(www.justkannada.in):  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಕೇಂದ್ರ ಕೃಷಿ ಮತ್ತು ಗ್ರಾಮೀಣಾಭಿವೃಧ್ಧಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನು ಭೇಟಿಯಾಗಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯ ನೋಂದಣಿ ಅವಧಿಯನ್ನು ಆಗಸ್ಟ್ 14 ರ ವರೆಗೆ ವಿಸ್ತರಿಸುವಂತೆ ಮನವಿ ಮಾಡಿದರು.

ಇದಲ್ಲದೆ, ಬೆಳೆವಿಮೆಯ ಹಿಂದಿನ ಕ್ಲೇಮುಗಳನ್ನು ಇತ್ಯರ್ಥ ಪಡಿಸಲು ಕ್ರಮ ವಹಿಸುವಂತೆಯೂ ಮನವಿ ಮಾಡಿದರು. ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ 2019-20ರ ಅನುದಾನ ಬಿಡುಗಡೆ ಹಾಗೂ ರಾಜ್ಯ ಸರ್ಕಾರವು 2015-16, 2016-17 ಮತ್ತು 2019-20ರಲ್ಲಿ ಪಾವತಿಸಿರುವ ಮುಂಗಡ ಅನುದಾನವನ್ನು ಬಿಡುಗಡೆ ಮಾಡುವಂತೆ ಕೋರಿದೆ.

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರಾಜ್ಯದ ಎಲ್ಲ ಅರ್ಹ ರೈತರಿಗೂ ಹಣ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಲೋಕಸಭಾ ಸದಸ್ಯರಾದ ಶೋಭಾ ಕರಂದ್ಲಾಜೆ, ಶಾಸಕರಾದ ಜಗದೀಶ್ ಶೆಟ್ಟರ್ ಮತ್ತು ಆರ್. ಅಶೋಕ್ ಉಪಸ್ಥಿತರಿದ್ದರು.

Key words: CM BS Yeddyurappa- meet- Union Minister -Narendra Singh Tomar –appeal